ಸುದ್ದಿಲೈವ್/ಶಿವಮೊಗ್ಗ
ತಂಬಾಕು ಮುಕ್ತ ಯುವ ಅಭಿಯಾನ 2.0 ಹಾಗು ವ್ಯಸನ ಮುಕ್ತ ಕರ್ನಾಟಕ ಅಭಿಯಾನದಡಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ವಿಜಯ ಕರ್ನಾಟಕ ಪತ್ರಿಕೆ ಇವರ ಸಹಯೋಗದಲ್ಲಿ ಬೆಳಗ್ಗೆ 7 ಗಂಟೆಗೆ ತುಂಗಾ ನಗರ ಪೊಲೀಸ್ ಠಾಣೆಯಿಂದ ಸರ್ಕಾರಿ ಬಸ್ ನಿಲ್ದಾಣದ ಅಶೋಕ ವೃತ್ತದವರೆಗೆ ಪೊಲೀಸರಿಂದ ಬೈಕ್ ಜಾಥ ವನ್ನು ನಡೆಸಲಾಯಿತು.
ನಂತರ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ತಂಬಾಕು ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗಳಾದ ಶ್ರೀ ಅನಿಲ್ ಕುಮಾರ್ ಭೂಮರೆಡ್ಡಿ, ಶ್ರೀ ಕಾರ್ಯಪ್ಪ,
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ನಟರಾಜ್ ಕೆ ಎಸ್ , ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳಾದ ಡಾ. ನಾಗರಾಜ್ ನಾಯಕ್, ವಿಜಯ ಕರ್ನಾಟಕ ಪತ್ರಿಕೆಯ ಅತೀಶ್, ಪೋಲಿಸ್ ಹಾಗು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ವಿವಿಧ ಮಾಧ್ಯಮಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ನಂತರ ಆರೋಗ್ಯ ಇಲಾಖೆ ಆಶಾ ಕಾರ್ಯಕರ್ತರು ಅಶೋಕ ವೃತ್ತ ದಿಂದ ಕುವೆಂಪು ರಂಗಮಂದಿರದವರೆಗೆ ಕಾಲ್ನಡಿಗೆ ಜಾಥವನ್ನು ನಡೆಸಿದರು.
ನಂತರ 10.30 ಗಂಟೆಗೆ ಸಭಾ ಕಾರ್ಯಕ್ರಮವು ಕುವೆಂಪು ರಂಗಮಂದಿರದಲ್ಲಿ ಆರಂಭವಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ನಟರಾಜ್ ಕೆ ಎಸ್ ಇವರು ವಹಿಸಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಿ ಕೆ ಮಿಥುನ್ ಕುಮಾರ್ ಇವರು ಉದ್ಘಾಟಿಸಿದರು.
ವೇದಿಕೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಎ ಜಿ ಕಾರ್ಯಪ್ಪ ಇವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಮಾನಸಿಕ ಸಮಸ್ಯೆಗಳು ಹಾಗೂ ಪರಿಹಾರ ಕುರಿತು ಡಾ. S T ಅರವಿಂದ್, ಪ್ರಸನ್ನ ಮುಕ್ತಿ ತಜ್ಞರು, ಪಾಸಿಟಿವ್ ಮೈಂಡ್ ಆಸ್ಪತ್ರೆ,ಶಿವಮೊಗ್ಗ ಇವರು ಉಪನ್ಯಾಸ ನೀಡಿದರು.
ಮಾದಕ ವಸ್ತುಗಳ ವ್ಯಸನದಿಂದ ಉಂಟಾಗುವ ಕಾನೂನಾತ್ಮಕ ಸಮಸ್ಯೆಗಳ ಕುರಿತು ಶ್ರೀ ಅನಿಲ್ ಕುಮಾರ್ ಭೂಮರೆಡ್ಡಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಇವರು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.