ನ.26 ರಿಂದ ಭದ್ರ ನಾಲೆಗಳಿಗೆ ಮುಂಗಾರು ಹಂಗಾಮಿನ ನೀರು ಸ್ಥಗಿತ


ಸುದ್ದಿಲೈವ್/ಶಿವಮೊಗ್ಗ

ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ, ಕಛೇರಿ ಅಧಿಸೂಚನೆಯ ದಿನಾಂಕ:29.07.2024 ರಿಂದ ಭದ್ರಾ ಜಲಾಶಯದಿಂದ ನೀರನ್ನು ಹರಿಬಿಡಲಾಗಿದ್ದು, ನೀರನ್ನು ಹರಿಸುವ ಗರಿಷ್ಠ ಅವಧಿ 120 ದಿನಗಳು ದಿ:26.11.2024ಕ್ಕೆ ಪೂರ್ಣಗೊಳ್ಳಲಿದೆ. 

ಆದ್ದರಿಂದ ದಿ:26.11.2024ರ ರಾತ್ರಿಯಿಂದ ಬಲದಂಡೆ ಮತ್ತು ಎಡದಂಡೆ ನಾಲೆಗಳಲ್ಲಿ ನೀರು ಹರಿಸುವುದನ್ನು ನಿಲ್ಲಿಸಲಾಗುವುದು. ಭದ್ರಾ ಜಲಾಶಯದ ಅಚ್ಚುಕಟ್ಟುದಾರರು ನಿಗಮದೊಂದಿಗೆ ಸಹಕರಿಸುವಂತೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close