ಸುದ್ದಿಲೈವ್/ಶಿವಮೊಗ್ಗ
8 ನೇ ತರಗತಿ ಓದುತ್ತಿದ್ದ ಬಾಲಕಿಯೋರ್ವಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಇಂದು ಮಾರ್ನಿಂಗ್ ಸ್ಕೂಲ್ ಮುಗಿಸಿಕೊಂಡು ಮನೆಗೆ ಬಂದಿದ್ದ ಫಾತಿಮಾ (13) ಎಂಬ ಬಾಲಕಿ ನೇಣು ಬಿಗಿದುಕೊಂಡಿದ್ದಾಳೆ. ಬಾಲಕಿಯ ಆತ್ಮಹತ್ಯೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ನಗರದ ಬಿಹೆಚ್ ರಸ್ತೆಯಲ್ಲಿರುವ ಪ್ರತಿಷ್ಠಿತ ಶೂ ಅಂಗಡಿಯ ಮಾಲೀಕರ ಮಗಳಾಗಿದ್ದ ಫಾತಿಮಾಳರನ್ನ ತಕ್ಷಣವೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಬಾಲಕಿಯ ಸಾವನ್ನ ವೈದ್ಯರು ಖಚಿತ ಪಡಿಸಿದ್ದಾರೆ. ಘಟನೆ ಇಂದು ಮಧ್ಯಾಹ್ನ 1-32 ರ ವೇಳೆಗೆ ನಡೆದಿದೆ.
ಕೆ.ಆರ್.ಪುರಂನ ಮನೆಯಲ್ಲಿ ಘಟನೆ ನಡೆದಿದೆ. ಪ್ರಕರಣ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.