ಸುದ್ದಿಲೈವ್/ಶಿವಮೊಗ್ಗ
ಸಾಗರ ತಾಲೂಕಿನ ಆನಂದಪುರ ಸಮೀಪದ ಹೊಸಗುಂದ ತಿರುವಿನ ಬಳಿ ಖಾಸಗಿ ಬಸ್ ಅಪಘಾತವಾಗಿದೆ.
ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಎಸ್ ಜಿ ಎಂಟಿ ಕಂಪನಿಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಬಸ್ನಲ್ಲಿ 15 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದು ಹಲವರಿಗೆ ಸಣ್ಣ ಪುಟ್ಟ ಗಾಯವಾಗಿದೆ.
ತಕ್ಷಣ ಅವರನ್ನು ಸಾಗರ ಹಾಗೂ ಆನಂದಪುರ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಆನಂದಪುರ 112 ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ