ಸುದ್ದಿಲೈವ್/ಶಿವಮೊಗ್ಗ
ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ವಿನ್ ಲೈಫ್, ಡಯಬಿಟಿಸ್ ವೆಲ್ ನೆಸ್ ಸೆಂಟರ್, ಮೆಟ್ರೋ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಸಹಯೋಗದೊಂದಿಗೆ ನಡೆದ ಕಾರ್ಯಾಗಾರದಲ್ಲಿ ಆಶಾ ಕಾರ್ಯಕರ್ತೆಯರು ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದರು.
ಈ ಕಾರ್ಯಾಗಾರದಲ್ಲಿ ಮಧುಮೇಹ @360°, ಸಮತೋಲನ ಆಹಾರ ಪದ್ಧತಿ, ಮೆಡಿಕಲ್ ಯೋಗ ಥೆರಪಿ, ತುರ್ತು ಜೀವ ರಕ್ಷಕ ತರಬೇತಿ ಹಾಗೂ ಆಧುನಿಕ ಆವಿಷ್ಕಾರಗಳ ಬಗ್ಗೆ ಪ್ರಾತ್ಯಕ್ಷಿಕೆ ಮತ್ತು ಉಪನ್ಯಾಸವನ್ನು ಸವಿಸ್ತಾರವಾಗಿ ನೀಡಲಾಯಿತು.
ಡಾ ಪೃಥ್ವಿ ಬಿ. ಸಿ ಯವರಿಂದ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಡಯಬಿಟಿಸ್ ಕುರಿತು ಸಂಪೂರ್ಣ ಮತ್ತು ನಿರಂತರ ಮಾಹಿತಿಗಾಗಿ ಕ್ಯೂ ಆರ್ ಸ್ಕ್ಯಾನರ್ ಕೋಡ್ ನ್ನು ಅನಾವರಣಗೊಳಿಸಲಾಯಿತು.
ಗ್ರಾಮೀಣ ಭಾಗದಲ್ಲಿ ಜನರಿಗೆ ಹತ್ತಿರವಾಗಿ ಸೇವೆ ಸಲ್ಲಿಸುವ ಆಶಾ ಕಾರ್ಯಕರ್ತೆಯರು ಮನಸು ಮಾಡಿದರೆ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಬಗೆಗೂ ಜನರಲ್ಲಿ ದೊಡ್ಡ ಜಾಗೃತಿ ಮೂಡಿಸಲು ಸಾಧ್ಯವಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅಭಿಪ್ರಾಯಪಟ್ಟರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಸ್. ನಟರಾಜ್ ಮಾತನಾಡಿ, ಆರೋಗ್ಯ ಸುಧಾರಣೆಯಲ್ಲಿ ಆಶಾ ಕಾರ್ಯಕರ್ತೆಯರು ಕೊಡುಗೆ ಅಪಾರವಾಗಿದೆ. ಅವರಿಗೆ ಇಂತಹ ತರಬೇತಿ ಅಗತ್ಯವಾಗಿ ಬೇಕಾಗಿತ್ತು. ಆ ನಿಟ್ಟಿನಲ್ಲಿ ವಿನ್ ಲೈಫ್, ಡಯಬಿಟಿಸ್ ವೆಲ್ ನೆಸ್ ಸೆಂಟರ್ ಹಾಗೂ ಮೆಟ್ರೋ ಆಸ್ಪತ್ರೆ ಮಧು ಮೇಹ ಮತ್ತು ಸಿಪಿಆರ್ ಕುರಿತು ಹಮ್ಮಿಕೊಂಡಿರುವ ತರಬೇತಿ ಕಾರ್ಯಾಗಾರ ಶ್ಲಾಘನೀಯವಾದದ್ದು ಎಂದರು.
ವೇದಿಕೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಿಥುನ್ ಕುಮಾರ್ ಜಿ ಕೆ, ಡಾ ನಟರಾಜ್ ಕೆ ಎಸ್ -ಶಿವಮೊಗ್ಗ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಧಿಕಾರಿಗಳು, ಡಾ ಓ ಮಲ್ಲಪ್ಪ- ಆರ್ ಸಿ ಹೆಚ್ ಅಧಿಕಾರಿಗಳು, ಡಾ ನಾಗರಾಜ್ ನಾಯಕ್ ಎಲ್ - ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು, ಮೆಟ್ರೋ ಆಸ್ಪತ್ರೆಯ ಅಧ್ಯಕ್ಷರಾದ ಡಾ. ಪಿ. ಲಕ್ಷ್ಮೀ ನಾರಾಯಣ ಆಚಾರ್ ಹಾಗೂ ವಿನ್ ಲೈಫ್ ನ ಮ್ಯಾನಜಿಂಗ್ ಟ್ರಸ್ಟಿ ಹಾಗೂ ಮೆಟ್ರೋ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಪೃಥ್ವಿ ಬಿ.ಸಿ. ಯವರು ಉಪಸ್ಥಿರಿದ್ದರು.