ಸುದ್ದಿಲೈವ್/ಶಿವಮೊಗ್ಗ
ಗಾಂಧಿ ಬಜಾರ್‌ನ ಜೈ ಅಂಬೆ ಮಾರ್ಕೆಟಿಂಗ್ ಅಂಗಡಿಯಲ್ಲಿ ಕಳೆದ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 6 ಲಕ್ಷ ರೂ. ನಷ್ಟವಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.
ಗಾಂಧಿ ಬಜಾರ್ 1ನೇ ಅಡ್ಡರಸ್ತೆಯಲ್ಲಿರುವ ಜೈ ಅಂಬೆ ಮಾರ್ಕೆಟಿಂಗ್ ಸಂಸ್ಥೆಯಲ್ಲಿ ಗ್ಯಾಸ್ ಸ್ಟೌ, ಫ್ಯಾನ್‌ಗಳು ಸೇರಿದಂತೆ ವಿವಿಧ ಉಪಕರಣ ಮಾರಾಟ ಮಾಡಲಾಗುತ್ತಿತ್ತು. ಕಳೆದ ರಾತ್ರಿ ಅಂಗಡಿಯ ಮೇಲ್ಭಾಗದ ಗೋಡೋನ್‌ನಲ್ಲಿ ಧಿಡೀರ್ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿದ್ದ ಹಲವು ವಸ್ತುಗಳು ಸುಟ್ಟು ಹೋಗಿವೆ.
ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿದ್ದು ಹೇಗೆ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.