ದಿಶಾ ಮೀಟಿಂಗ್ ನಲ್ಲೂ ನೆಟ್ ವರ್ಕ್ ಮತ್ತು ಕಡದಕಟ್ಟೆ ರೈಲ್ವೆ ಮೇಲ್ಸೇತುವೆ ಕುರಿತು ಚರ್ಚೆ



ಸುದ್ದಿಲೈವ್/ಶಿವಮೊಗ್ಗ

ನಗರದ ಜಿಲ್ಲಾ ಪಂಚಾಯತ್ ನ ನಜೀರ್ ಸಾಬ್ ಸಭಾಂಗಣದಲ್ಲಿ ಸಂಸದ ರಾಘವೇಂದ್ರ ಅವರ ನೇತೃತ್ವದಲ್ಲಿ ದಿಶಾ ಪ್ರಗತಿ ಪರಿಶೀಲನಾ ಸಭೆ ನಡೆದಿದೆ. ಜಿಲ್ಲಾ ಮಟ್ಟದ ಅಭಿವೃದ್ದಿ, ಸಮನ್ವಯತೆ ಹಾಗೂ ಮೇಲ್ವಿಚಾರಣೆ ಸಮಿತಿ ಸಭೆಯ ಬಗ್ಗೆ ಚರ್ಚಿಸಲಾಯಿತು. 

ಜಿಲ್ಲೆಯಲ್ಲಿರುವ ನೆಟ್ ವರ್ಕ್ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದ ರಾಘವೇಂದ್ರ ಪೋನ್ ಇಲ್ಲದೆ ಜೀವನ ಇಲ್ಲದಂತಾಗಿದೆ ಕೂಡಲೇ ಬಿಎಸ್ಎನ್ಎಲ್ ನೆಟ್ ವರ್ಕ್ ಸಮಸ್ಯೆ ಬಗೆಹರಿಸಬೇಕು ಎಂದು ಸಂಬಂಧ ಪಟ್ಟ ಅಧಿಕರಿಗಳಿಗೆ  ಸೂಚಿಸಿದರು.

ಶೀಘ್ರದಲ್ಲೇ ವಂದೇ ಭಾರತ್ ರೈಲು ಓಡಾಡಲಿದೆ. ಹರಿಕಥೆ ಹೇಳದೆ ಭದ್ರಾವತಿ ರೈಲ್ವೆ ಮೇಲ್ಸೇತುವೆ ಪೂರ್ಣಗೊಳಿಸುವಂತೆ ಸಂಸದರು ಸೂಚಿಸಿದರು. ಸಭೆಯಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ,  ಶಾಸಕ ಚನ್ನಬಸಪ್ಪ ಎಂಎಲ್ಸಿ ಡಾ. ಧನಂಜಯ ಸರ್ಜಿ,ಬಲ್ಕಿಶ್ ಭಾನು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close