ಟಿ. ಸುಬ್ಬರಾಮಯ್ಯ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ಸಂತಾಪ


ಸುದ್ದಿಲೈವ್/ಶಿವಮೊಗ್ಗ

ಸುಬ್ಬಯ್ಯ ಟ್ರಸ್ಟ್ ಮತ್ತು ಮ್ಯಾಕ್ಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಟಿ ಸುಬ್ಬರಾಮ್ಮಯ್ಯ ಅವರ ನಿಧನಕ್ಕೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ. 

ಶಿವಮೊಗ್ಗ ನಗರದಲ್ಲಿ ವೈದ್ಯಕೀಯ ಹಾಗೂ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದು, ನಗರದ ಉದ್ಯಮ ವಲಯಕ್ಕೆ ಗಣಿನಿಯ ಸೇವೆ ಸಲ್ಲಿಸಿದ್ದಾರೆ. ಇವರ ಅಗಲಿಕೆಯಿಂದ ಶಿವಮೊಗ್ಗ ನಗರದಲ್ಲಿ ಒಬ್ಬ ಅತ್ಯುತ್ತಮ ಉದ್ಯಮಿಯನ್ನು ಕಳೆದುಕೊಂಡು ಉದ್ಯಮ ಕ್ಷೇತ್ರಕ್ಕೆ ನಷ್ಟ ಉಂಟಾಗಿದೆ. ಕುಟುಂಬ ವರ್ಗಕ್ಕೆ ಹಾಗೂ ಇವರ ಸಮೂಹ ಸಂಸ್ಥೆಗಳ ಸಿಬ್ಬಂದಿ ವರ್ಗಕ್ಕೆ ಇವರ ಅಗಲಿಕೆ ನೋವನ್ನು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close