ನಾಳೆ ಮತ್ತು ನಾಡಿದ್ದು ವಿದ್ಯುತ್ ವ್ಯತ್ಯಯ


ಸುದ್ದಿಲೈವ್/ಶಿವಮೊಗ್ಗ

ಎಲ್ ಟಿ ವಿದ್ಯುತ್ ಮಾರ್ಗ ಬದಲಾವಣೆ ಮತ್ತು ಉಪವಿಭಾಗ-1ರ ಘಟಕ-3ರ ವ್ಯಾಪ್ತಿಯಲ್ಲಿ ನವುಲೆ ಹತ್ತಿರ ಎಲ್.ಟಿ. ವಿದ್ಯುತ್ ಮಾರ್ಗ ಬದಲಾಯಿಸುವ ಕಾಮಗಾರಿ ಹಿನ್ನಲೆಯಲ್ಲಿ ನಾಳೆ ಮತ್ತು ನಾಡಿದ್ದು ಎರಡು ದಿನ ವಿದ್ಯುತ್ ವ್ಯತ್ಯಯವಾಗಲಿದೆ.

ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ-3ರ ವ್ಯಾಪ್ತಿಯಲ್ಲಿ ತ್ಯಾವರೆಚಟ್ನಹಳ್ಳಿ, ಈಶ್ವರ್ ರೈಸ್ ಮಿಲ್ ಹತ್ತಿರ ಎಲ್.ಟಿ. ವಿದ್ಯುತ್ ಮಾರ್ಗ ಬದಲಾಯಿಸುವ ಕಾಮಗರಿ ಇರುವುದರಿಂದ ನ.29 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ತ್ಯಾವರೆಚಟ್ನಹಳ್ಳಿ, ವಿಜಯಲಕ್ಷ್ಮೀ ರೈಸ್ ಮಿಲ್, ಈಶ್ವರ್ ರೈಸ್ ಮಿಲ್, ತರಳಬಾಳು ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ-3ರ ವ್ಯಾಪ್ತಿಯಲ್ಲಿ ನವುಲೆ ಹತ್ತಿರ ಎಲ್.ಟಿ. ವಿದ್ಯುತ್ ಮಾರ್ಗ ಬದಲಾಯಿಸುವ ಕಾಮಗರಿ ಇರುವುದರಿಂದ ನ.30 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ನವುಲೆ, ಇಂದಿರಾನಗರ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ನವುಲೆ ಬಿ.ಸಿ.ಎಮ್. ಹಾಸ್ಟೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close