ಸಿ.ಎಸ್. ಷಡಾಕ್ಷರಿ ವಿರುದ್ಧ ಕ್ರಮಕ್ಕೆ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಆಗ್ರಹ




ಸುದ್ದಿಲೈವ್/ಶಿವಮೊಗ್ಗ

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ವಿರುದ್ಧ ವಿನಯ್ ತಾಂಡ್ಲೆ ನೇತೃತ್ವದಲ್ಲಿ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್  ಘೋಷಣೆ ಕೂಗಿದೆ. ಷಡಾಕ್ಷರಿಯವರು ಸಚಿವ ಮಧು ಬಂಗಾರಪ್ಪನವರ ಬಗ್ಗೆ ಹಗೂರವಾಗಿ ಮಾತನಾಡಿದ್ದಾರೆ ಎಂದು ಆರೋಪಿ  ಪ್ರತಿಭಟನೆ ನಡೆಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇಂದು ಜಿಲ್ಲಾ ಪಂಚಾಯತ್ ನ ಕೆಡಿಪಿ ಸಭೆಗೆ ಆಗಮಿಸುವ ಸಂದರ್ಭದಲ್ಲಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಸಚಿವ ಮಧು ಬಂಗಾರಪ್ಪ ಕುರಿತು ರಾಜ್ಯಾಧ್ಯಕ್ಷರು ಲಘುವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. 

ಇತ್ತೀಚೆಗೆ ಸಚಿವ ಮಧು ಬಂಗಾರಪ್ಪ ಅವರು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದರು‌. ಸಭೆಯಲ್ಲಿ ಸರ್ಕಾರಿ ನೌಕರರ ವಸತಿ ಗೃಹ ನವೀಕರಣಕ್ಕೆ 2 ಕೋಟಿ ರೂ. ಖರ್ಚು ಮಾಡಲಾಗಿದೆ. ಆದರೆ ಪಿಡಬ್ಲೂಡಿಯಲ್ಲಿ 17 ಲಕ್ಷ ರೂ. ಖರ್ಚಾಗಿದೆ. ಉಳಿದ ಹಣ ಎಲ್ಲಿಂದ ಬಂತು? ಭ್ರಷ್ಠಾಚಾರ ನಡೆದಿದೆ ಅಧಿಕಾರಿಗಳು ಏನು ಮಾಡುತ್ತಿದ್ದೀರ ಎಂದು ಪ್ರಶ್ನಿಸಿದ್ದರು. 

ಈ ಕುರಿತಂತೆ ಷಡಾಕ್ಷರಿ ಅವರು ಸಚಿವರ ಬಳಿ ಸ್ಪಷ್ಟನೆ ನೀಡದೆ ಮಾಧ್ಯಮಗಳ ಎದುರು ಸಚಿವರನ್ನ ಅಪಮಾನಿಸುವ ರೀತಿಯಲ್ಲಿ ಮಾತನಾಡಿರುವ ಷಡಾಕ್ಷರಿಯವರ ವಿರುದ್ಧ ಕ್ರಮ ಜರುಗಿಸುವಂತೆ ಸಚಿವ ಮಧು ಬಂಗಾರಪ್ಪನವರಿಗೆ ಮನವಿ ಮಾಡಿದ್ದಾರೆ. 

ಷಡಾಕ್ಷರಿ ವಿರುದ್ಧ ಆಕ್ರೋಶ ಘೋಷಣೆ ಕೂಗಿದ ಕಾರ್ಯಕರ್ತರು, ಸರ್ಕಾರಿ ನೌಕರನಾಗಿದ್ದು ಸಚಿವರ ಬಗ್ಗೆ ಅಗೌರವವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾರೆ, ಷಡಾಕ್ಷರಿ ಬಿಜೆಪಿ ಏಜೆಂಟ್ ಅವರ ವಿರುದ್ಧ ಕ್ರಮಕ್ಕೆ ಪ್ರತಿಭಟನಾಕಾರರು ಆಗ್ರಹಿಸಿ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. 

ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಧು ಬಂಗಾರಪ್ಪ, ತಪ್ಪು ಮಾಡಿದವರು ಅನಭವಿಸುತ್ತಾರೆ ಎಂದು ಹೇಳಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close