ಸುದ್ದಿಲೈವ್/ಶಿವಮೊಗ್ಗ
ಹೊಳಲೂರು 66/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಮಾರ್ಗಗಳಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ. 17 ರಿಂದ 20 ರವರೆಗೆ ವಿದ್ಯುತ್ ವ್ಯತ್ಯಯವಾಗಿದೆ.
ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು ಮತ್ತು ಬಿ.ಕೆ.ತಾವರೆ ಗ್ರಾಮಗಳ ವ್ಯಾಪ್ತಿಯಲ್ಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.