ಸುದ್ದಿಲೈವ್/ಶಿವಮೊಗ್ಗ
ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ವಿಜಯೋತ್ಸವ ಅರ್ಥಗರ್ಭಿತವಾಗಿದ್ದರೆ, ಬಿಜೆಪಿಯ ವಿಜಯೋತ್ಸವ ಅಚ್ಚರಿ ಮೂಡಿಸಿದೆ.
ಶಿವಮೊಗ್ಗದ ಎರಡೂ ರಾಷ್ಟ್ರೀಯ ಪಕ್ಷಗಳ ಕಚೇರಿಯಲ್ಲಿ ಇಂದು ಸಂಭ್ರಮ ಮೂಡಿಸಿದೆ. ರಾಜ್ಯದ ಮೂರು ಬೈ ಎಲೆಕ್ಷನ್ನ ಗೆದ್ದ ಕಾಂಗ್ರೆಸ್ ಗೆದ್ದ ಕಾರಣ ಜಿಲ್ಲಾ ಕಾಂಗ್ರೆಸ್ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಆದರೆ ಬಿಜೆಪಿ ರಾಜ್ಯದಲ್ಲಿ ಮೂರು ಬೈ ಎಲೆಕ್ಷನ್ ಸೋತರೂ ರಾಷ್ಟ್ರ ರಾಜಕಾರಣದ ಲೆಕ್ಕಾಚಾರದಲ್ಲಿ ಮಹಾರಾಷ್ಟ್ರದಲ್ಲಿ ಆಡಳಿತ ವಿರೋಧ ಅಲೆಯ ನಡುವೆಯೂ ಮತ್ತೆ ಬಿಜೆಪಿ ಮೈತ್ರಿಕೂಟ ಗೆದ್ದು ಆಡಳಿತದ ಚುಕ್ಕಾಣಿ ಹಿಡಿದ ಕಾರಣ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆಯನ್ನ ಆಚರಿಸಿದೆ.
ರಾಜ್ಯದಲ್ಲಿ ನಡೆದ 3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಚೇರಿ ಎದುರು ಮತ್ತು ಶಿವಪ್ಪ ನಾಯಕ ವೃತ್ತದ ಬಳಿ ಹೆಚ್ ಸಿ ಯೋಗೀಶ್, ನೇತೃತ್ವದಲ್ಲಿ ವಿಜಯೋತ್ಸವ ನಡೆದಿದೆ.
ಕಾಂಗ್ರೆಸ್ ಪಕ್ಷದ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆಶಿ ಪರ ಘೋಷಣೆ ಕೂಗಲಾಯಿತು. ಶಿವಪ್ಪ ನಾಯಕ ಪ್ರತಿಮೆ ಬಳಿ ಯೋಗೀಶ್ ನೇತೃತ್ವ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಈ ವೇಳೆ ನಿಖಿಲ್ ಎಲ್ಲಿದೆಯಾಪ್ಪ, ಮನೆಯಲ್ಲಿದ್ದೀನಪ್ಪ ಎಂಬ ಅಣಕಿನ ಘೋಷಣೆಯನ್ನ ಮಾಡಿರುವುದು ಗಮನ ಸೆಳೆದಿದೆ. ಈ ವೇಳೆ ಉತ್ತರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಶಿವುಕುಮಾರ್, ದೇವೇಂದ್ರಪ್ಪ, ವಿಜಯಲಕ್ಷ್ಮಿ ಪಾಟೀಲ್ ಮೊದಲಾದವರು ಭಾಗಿಯಾಗಿದ್ದರು.
ಮಹಾರಾಷ್ಟ್ರದಲ್ಲಿ ಎನ್ ಡಿಎ ಅಭ್ಯರ್ಥಿಗಳು ಜಯಭೇರಿ ಹಿನ್ನೆಲೆಯಲ್ಲಿ, ಶಿವಮೊಗ್ಗದಲ್ಲಿ ಬಿಜೆಪಿ ಕಚೇರಿಯ ಎದುರು ಕಾರ್ಯಕರ್ತರ ವಿಜಯೋತ್ಸವ ನಡೆಸಿದೆ. ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ವಿಜಯೋತ್ಸವ ನಡೆದಿದೆ. ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದ ಕಾರ್ಯಕರ್ತರು