ಡಿ.20 ರಂದು ವಿದ್ಯುತ್ ವ್ಯತ್ಯಯ


ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ತಾಲ್ಲೂಕು, ಸಂತೇಕಡೂರು ಗ್ರಾಮದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಮತ್ತು ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರು, ಎಫ್-4 ಸಂತೇಕಡೂರು ಎಫ್-8 ಗಣಿದಾಳು ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಡಿ.20 ರಂದು ಬೆಳಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

 ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close