ಸುದ್ದಿಲೈವ್/ಶಿವಮೊಗ್ಗ
ತೋಟಗಾರಿಕೆ ಇಲಾಖೆಯು ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನುಕೃಷಿಕರ ಆರ್ಥಿಕ ಮಟ್ಟ ಹೆಚ್ಚಿಸಲು ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ “ಝೇಂಕಾರ/Jhenkara“ ಎಂಬ ಬ್ರ್ಯಾಂಡ್, ಟ್ಯಾಗ್ ಲೈನ್, ಲೋಗೋ ಮತ್ತು ಪ್ಯಾಕೇಜಿಂಗ್ ವಿನ್ಯಾಸಗಳನ್ನು ಅಭಿವೃದ್ಧಿ ಪಡಿಸಿ ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ ಅಧಿಕೃತವಾಗಿ ಅನುಮೋದನೆ ಪಡೆಯಲಾಗಿರುತ್ತದೆ.
ಜೇನುತುಪ್ಪ ಉತ್ಪಾದಕರು ಮತ್ತು ಸಂಗ್ರಾಹಕರು ತೋಟಗಾರಿಕೆ ಇಲಾಖೆಯ ಮಾಲೀಕತ್ವದ ಈ ಬ್ರ್ಯಾಂಡ್ ಹೆಸರು ಮತ್ತು ಲೋಗೋವನ್ನು ಬಳಸಿಕೊಂಡು ಜೇನುತುಪ್ಪ ಹಾಗೂ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶವಿರುತ್ತದೆ. ಜೇನು ಕೃಷಿಕರು ಮತ್ತು ಸಂಗ್ರಾಹಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವುದು.