ಸುದ್ದಿಲೈವ್/ಭದ್ರಾವತಿ
ಭದ್ರಾವತಿಯ ಗಣೇಶ್ ರೈಸ್ ಮಿಲ್ ಸ್ಪೋಟಕ್ಕೆ ಸಂಬಂಧಿಸಿದಂತೆ ಎಸ್ಪಿ ಮಿಥುನ್ ಕುಮಾರ್ ಪ್ರತಿಕ್ರಿಯಿಸಿದ್ದು ಬಾಯ್ಲರ್ ಸ್ಪೋಟದಿಂದ 7 ಜನ ಗಾಯಗೊಂಡಿರುವುದಾಗಿ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಏಳು ಜನರು ಗಾಯಾಳುಗಳಿಗೆ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದು, ಇದರಲ್ಲಿ ರಘು ಎಂಬ ಕಾರ್ಮಿಕ ಸ್ಪೋಟದಲ್ಲಿ ನಾಪತ್ತೆಯಾಗಿರುವುದಾಗಿ ತಿಳಿದು ಬಂದಿರುವುದಾಗಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಲೈವ್ ಗೆ ಸಿಕ್ಕ ಮಾಹಿತಿ ಪ್ರಕಾರ, ಏಳು ಜನ ಕಾರ್ಮಿಕರಲ್ಲಿ ನಾಲ್ವರನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ. ಅದರಲ್ಲಿ ದುಯ್ಯದ್ ಹುಸೇನ್, ಫಯಾಜ್, ಮೊಹಮದ್ ಬಿಲಾಲ್, ರಾಜು ಎಂಬುವರನ್ನ ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.
ನಾಪತ್ತೆಯಾಗಿರುವ ಕಾರ್ಮಿಕ ರಘು ವಿಗಾಗಿ ತೀವ್ರ ಶೋಧಕಾರ್ಯ ನಡೆಸಲಾಗುತ್ತಿದ್ದು, ಸ್ಥಳದಲ್ಲಿ ಅಗ್ನಿಶಾಮಕದಳ, ಅಂಬ್ಯುಲೆನ್ಸ್, ಮೆಸ್ಕಾಂ, ನಗರಸಭೆ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಂ ಹೂಡಿದ್ದಾರೆಂದು ಎಸ್ಪಿ ಅವರು ಮಾಹಿತಿ ನೀಡಿದ್ದಾರೆ.