ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗದ ಹೆಲಿಪ್ಯಾಡ್ ಬಳಿಯಿರುವ ಈಡಿಗರ ಭವನಕ್ಕೆ ತಿರುಗುವ ತಿರುವಿನಲ್ಲಿ ಭೀಕರ ರಸ್ತೆಅಪಘಾತವಾಗಿದ್ದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಸಾಗರ ರಸ್ತೆಯಲ್ಲಿ ಈಡಿಗರ ಭವನಕ್ಕೆ ತಿರುಗುತ್ತಿದ್ದ ವೇಳೆ ಎಡಭಾಗದಿಂದ ಓವರ್ ಟೇಕ್ ಮಾಡಲು ಯತ್ನಿಸಿದ ಪರಿಣಾಮ ಕೆಟಿಎಂ ಬೈಕು ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದ್ದಾನೆ. ಇಬ್ಬರು ಯುವಕರನ್ನ ಮೆಗ್ಗಾನ್ ಗೆ ಸಾಗಿಸಲಾಗಿದೆ.
ಇಬ್ಬರು ಯುವಕರನ್ನ ತಪಾಸಣೆ ನಡೆಸಿದ ವೈದ್ಯರು ಇಬ್ಬರ ಸಾವನ್ನ ಖಚಿತಪಡಿಸಿರುವುದಾಗಿ ತಿಳಿದುಬಂದಿದೆ. ಇಬ್ಬರು ಯುವಕರನ್ನ ಅಪರಿಚಿತ ಮೃತದೇಹಗಳೆಂದು ದಾಖಲಿಸಿಕೊಳ್ಳಲಾಗಿದೆ. ಇಬ್ಬರು ಯುವಕರು ಸಾಗರ ಕಡೆ ಹೊರಟಿದ್ದರು ಎನ್ನಲಾಗಿದೆ.
ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ. ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.