ಸುದ್ದಿಲೈವ್/ಶಿವಮೊಗ್ಗ
ನಗರದ ನ್ಯಾಷನಲ್ ಪ್ರೌಢಶಾಲಾ ವಿಭಾಗದ ಆವರಣದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ (ಕರ್ನಾಟಕ ಸರ್ಕಾರ) ಗಾಜನೂರಿನ 10ನೇ ತರಗತಿಯ ತಾರಾ.ಜಿ. ಇವರು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಇವರಿಗೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದವು ಮತ್ತು ಶಾಲಾ ಸಹಪಾಠಿಗಳು ಅಭಿನಂದನೆ ಸಲ್ಲಿಸಿ ರಾಜ್ಯ ಮಟ್ಟದಲ್ಲಿ ನಮ್ಮ ಶಿವಮೊಗ್ಗದ ತಾರ ರವರು ಒಳ್ಳೆಯ ಹೆಸರನ್ನು ಗಳಿಸಲಿ ಎಂದು ಶುಭ ಕೋರಿದ್ದಾರೆ.