ಶಾಲೆಯಲ್ಲಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು, ವಿಡಿಯೋ ವೈರಲ್

 


ಸುದ್ದಿಲೈವ್/ಶಿವಮೊಗ್ಗ

ನಗರದ ಖಾಸಗಿ ಕಾಲೇಜಿನಲ್ಲಿ  ವಿದ್ಯಾರ್ಥಿನಿಯೊಬ್ಬಳು ದಿಢೀರ್‌ ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಶಿವಮೊಗ್ಗದ ವಿದ್ಯಾನಗರದ ಬಳಿ ಇರುವ ಖಾಸಗಿ ಪಿಯು ಕಾಲೇಜಿನಲ್ಲಿ ಘಟನೆ ಸಂಭವಿಸಿದೆ. ಸಹಪಾಠಿಗಳ ಜೊತೆಗೆ ಪ್ರಾಂಶುಪಾಲರ ಕೊಠಡಿಯತ್ತ ಬಂದು ಬಾಗಿಲು ತೆಗೆಯುತ್ತಿದ್ದಾಗ ವಿದ್ಯಾರ್ಥಿನಿ ಕುಸಿದು ಬಿದ್ದಿದ್ದಾಳೆ. ಉಪನ್ಯಾಸಕರು, ಸಹಪಾಠಿಗಳು ಆಕೆಯ ನೆರವಿಗೆ ಧಾವಿಸಿದ್ದಾರೆ. 

ಕೂಡಲೆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆ ಆಕೆ ಕೊನೆ ಉಸಿರೆಳೆದಿದ್ದಾಳೆ. ವಿದ್ಯಾರ್ಥಿನಿ ಓದಿದ್ದ ಪ್ರೌಢಶಾಲೆಯ ಶಿಕ್ಷಕರು ಪಿಯು ಕಾಲೇಜಿಗೆ ಆಗಮಿಸಿದ್ದರು. ವಿಷಯ ತಿಳಿದು ಅವರನ್ನು ಮಾತನಾಡಿಸಲು ವಿದ್ಯಾರ್ಥಿನಿ ತನ್ನ ಸಹಪಾಠಿಗಳ ಜೊತೆಗೆ ಪ್ರಾಂಶುಪಾಲರ ಕೊಠಡಿಯತ್ತ ತೆರಳಿದ್ದಾಗ ಘಟನೆ ಸಂಭವಿಸಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close