ಸುದ್ದಿಲೈವ್/ಸಾಗರ
ಪಟ್ಟಣದ ಬಿ.ಹೆಚ್. ರಸ್ತೆಯಲ್ಲಿರುವ (ಎಲ್ಐಸಿ ಕಚೇರಿ ಎದುರು) ತಾಜ್ ಚಿಕನ್ ಸೆಂಟರ್ ನಲ್ಲಿ ಸೋಮವಾರ ರಾತ್ರಿ ಗ್ಯಾಸ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡಿತ್ತು. ಕೂಡಲೇ ಎಚ್ಚೆತ್ತ ಮಾಲೀಕರು ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಯಾವುದೇ ಜೀವ ಹಾನಿ ಸಂಭವಿಸಿಲ್ಲ.
ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾತ್ರಿ 9.45ರ ಸುಮಾರಿಗೆ ಘಟನೆ ನಡೆದಿದೆ. ಇದರಿಂದ ಬಿಎಚ್ ರಸ್ತೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.