ಸುದ್ದಿಲೈವ್/ಶಿವಮೊಗ್ಗ
ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಉಂಟಾಗಿದ್ದು, ಸ್ಥಳದಲ್ಲೇ ಓರ್ವ ಸಾವು ಕಂಡಿದ್ದಾನೆ. ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರ ಪೈಕಿ ಓರ್ವ ಯುವಕ ಸ್ಥಳದಲ್ಲೇ ಸಾವು ಕಂಡಿದ್ದು, ಮತ್ತೀರ್ವರಿಗೆ ಗಂಭೀರ ಗಾಯಗೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಸೂಡೂರು ಸೇತುವೆ ಬಳಿ ಈ ಘಟನೆ ನಡೆದಿದೆ. ರಿಪ್ಪನ್ ಪೇಟೆಯಿಂದ ಶಿವಮೊಗ್ಗ ಕಡೆಗೆ ಹೊರಟಿದ್ದ ಮಾರುತಿ ಆಲ್ಟೋ ಕಾರು ಮತ್ತು ಶಿವಮೊಗ್ಗದಿಂದ ರಿಪ್ಪನ್ ಪೇಟೆ ಕಡೆ ಹೊರಟಿದ್ದ ಬೈಕ್ ನಡುವೆ ಡಿಕ್ಕಿ ಉಂಟಾಗಿದೆ. ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಯುವಕರು ತೆರಳುವಾಗ ಈ ಘಟನೆ ನಡೆದಿದೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಳಸೆ ಬೆಳ್ಳೂರು ಮನೋಜ್ (20) ಎಂಬ ಯುವಕ ಸ್ಥಳದಲ್ಲೇ ಸಾವುಕಂಡಿದ್ದಾರೆ. ಅಕ್ಷಯ್ (18) ಮತ್ತೋರ್ವನಿಗೆ ತೀವ್ರತರ ಗಾಯಗಳಾಗಿವೆ.
ಗಾಯಗೊಂಡಿರುವ ಯುವಕರು ರಿಪ್ಪನ್‌ಪೇಟೆ ಮೂಲದ ಯುವಕರು ಎನ್ನಲಾಗುತ್ತಿದೆ. ಆಂಬುಲೆನ್ಸ್ ಗೆ ಕರೆ ಮಾಡಿ ಒಂದು ಗಂಟೆಯಾದರು ಆಂಬುಲೆನ್ಸ್ ಬಾರದೇ ಗಾಯಾಳುಗಳು ಒದ್ದಾಡುತ್ತಿರುವ ದೃಶ್ಯ ಮನಕಲುಕುವಂತಿತ್ತು ಎಂದು ಸ್ಥಳೀಯರು ಆರೋಪಿಸಿದ್ದಾರೆ.