ಸುದ್ದಿಲೈವ್/ಭದ್ರಾವತಿ
ಭದ್ರಾವತಿ ಚನ್ನಗಿರಿ ರಸ್ತೆಯಲ್ಲಿರುವ ಗಣೇಶ್ ರೈಸ್ ಮಿಲ್ ನಲ್ಲಿ ಬಾಯ್ಲರ್ ಸ್ಪೋಟವಾಗಿದ್ದು ನಾಲ್ಕರಿಂದ ಐದು ಜನರಿಗೆ ತೀವ್ರ ಗಾಯಗಳಾಗಿರುವ ಘಟನೆ ಇಂದು ಸಂಜೆ 6-20 ಕ್ಕೆ ನಡೆದಿದೆ.
ಈ ಘಟನೆಯಲ್ಲಿ ಓರ್ವ ಕಾರ್ಮಿಕ ರಘು ಎಂಬಾತ ನಾಪತ್ತೆಯಾಗಿದೆ. ಆತನಿಗಾಗಿ ಹುಡುಕಾಟ ಮುಂದುವರೆದಿದೆ. ಸ್ಪೋಟಗೊಂಡ ಬಾಯ್ಲರ್ ನಿಂದ ಕಬ್ಬಿಣದ ತುಂಡುಗಳು ಹಾರಿ ಅಣ್ಣಾ ನಗರ ಹೊಸಮನೆ ಭಾಗಳ ಮನೆಗಳು ಹಾನಿಯಾಗಿರುವುದಾಗಿ ವರದಿಯಾಗಿದೆ.
ಹೊಸಮನೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ಆರಿಸುವಲ್ಲಿ ಮಗ್ನರಾಗಿದ್ದಾರೆ. ಗಾಯಾಳುಗಳನ್ನ ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.