ಸುದ್ದಿಲೈವ್/ಶಿವಮೊಗ್ಗ
ಬೆಳಗಾವಿ ಅಧಿವೇಶನದ ಸಂಧರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿ ಮತ್ತು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದು, ಇಂದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ರಾಜ್ಯ ಅಂಗನವಾಡಿ ನೌಕರರ ಸಂಘ ಧರಣಿ ನಡೆಸಿದೆ.
ಅಂಗನವಾಡಿಯ ಕಾರ್ಯಕರ್ತೆಯರಿಗೆ ಖಾಯಂ ಕೆಲಸ ನಿಗದಿಪಡಿಸುವಂತೆ, ಸಂಬಳ ಬೇಕು, ಗೌರವಧನ ಬೇಡವೇ ಬೇಡ ಎಂಬ ಘೋಷಾವಾಕ್ಯದೊಂದಿಗೆ ರಾಜ್ಯ ಅಂಗನವಾಡಿ ನೌಕರರ ಸಂಘ ಸಿಐಟಿಯು ಜಿಲ್ಲಾ ಸಮಿತಿ ಇಂದು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಕಾರ್ಯಕರ್ತೆ ಸಹಾಯಕಿಯರನ್ನ ವರ್ಗ 3 ಮತ್ತು 4 ಎಂದು ಪರಿಗಣಿಸಿ ಖಾಯಂ ಮಾಡಬೇಕು ಗ್ರ್ಯಾಚ್ಯುಟಿ ಹಣ ಕೂಡಲೇಬಿಡುಗಡೆ ಮಾಡಬೇಕು. 2018 ರಿಂದ ಕೇಂದ್ರ ಸರ್ಕಾರ ಗೌರವಧನ ಹೆಚ್ಚಿಸಿಲ್ಲ ಅದನ್ನ 26 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು.
ನಿವೃತ್ತಿಯಾದವರಿಗೆ ಇಡಿಗಂಟು, ಅಥವಾ ಎನ್ ಪಿಎಸ್ ಹಣವನ್ನ 10 ಸಾವಿರ ರೂ.ಗೆ ಮಾಸಾಶನ ನೀಡಬೇಕು. ಶಿಕ್ಷಣ ಇಲಾಖೆ ಮತ್ತು ಎಸ್ ಡಿ ಎಂಸಿಗಳಿಂದ ಪ್ರಾರಂಭ ಮಾಡಿರುವ LKG-UKG ನಿಲ್ಲಿಸಿ ಎಲ್ಲಾ ಅಙಗನವಾಡಿ ಕೇಂದ್ರಗಳನ್ನ ಮೇಲ್ದರ್ಜೆಗೆ ಏರಿಸಿ ಅಂಗನವಾಡಿಯಲ್ಲಿಯೇ ಎಲ್ಲಾ LKG-UKG ಆರಂಭಿಸಬೇಕು.
ಐಸಿಡಿಎಸ್ ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಆರಂಭಿಸಬೇಕು. ಬಿಎಲ್ ಒ ಕೆಲಸಗಳಿಂದ ಅಂಗನವಾಡಿಯರನ್ನ ನುಕ್ತಗೊಳಿಸಬೇಕು. ಅಂಗನವಾಡಿ ಕಾರ್ಯಕರ್ತರಿಗೆ ಸಾಮೂಹಿಕ ಆರೋಗ್ಯ ವಿಮೆ ಜಾರಿಗೊಳಿಸುವಂತೆ ಹಾಗೂ ಇತರ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಇಂದು ಪ್ರತಿಭಟನೆ ನಡೆಸಲಾಯಿತು.