ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಲ್ಲಿ ಒಪ್ಪಿಕೊಳ್ಳಲು ಸಿದ್ದ-ಕುಮಾರ್ ಬಂಗಾರಪ್ಪ



ಸುದ್ದಿಲೈವ್/ಸೊರಬ

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಕೇಂದ್ರ ನಾಯಕರ ಗಮನಕ್ಕೆ ತರಲಾಗಿದ್ದು ವರಿಷ್ಠರು ಬಯಸಿ ಹಿಂದುಳಿದ ವರ್ಗಕ್ಕೆ ಪ್ರಾತಿನಿಧ್ಯ ಕಲ್ಪಿಸಿ ರಾಜ್ಯಾಧ್ಯಕ್ಷ ಸ್ಥಾನವನ್ನು ನೀಡುವುದಾದರೆ ಒಪ್ಪಿಕೊಳ್ಳಲು ಸಿದ್ಧನಿದ್ದೇನೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು.

 ಸೋಮವಾರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು ಮೂರು ದಶಕಗಳ ರಾಜಕೀಯ ಜೀವನದಲ್ಲಿ ರೈತರು ಹಾಗೂ ಜನಸಾಮಾನ್ಯರ ಕಲ್ಯಾಣಕ್ಕೆ ಶ್ರಮಿಸಿದ್ದೇನೆ.

 ಹಿಂದುಳಿದ ಸಮುದಾಯದ ಪ್ರಬಲ ನಾಯಕನಾಗಿ ಗುರುತಿಸಿಕೊಳ್ಳುವಲ್ಲಿ ಜನರ ಆಶೀರ್ವಾದ ಇದೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಪಕ್ಷದ ನಾಯಕರೊಂದಿಗೆ ಸ್ಪಂದಿಸುತ್ತಿಲ್ಲ ಎನ್ನುವ ಆರೋಪವಿತ್ತು. ಇದರ ಅನುಭವ ನನಗೂ ಆಗಿದೆ. ಅವರ ಕಾರ್ಯ ವೈಖರಿ ಬಗ್ಗೆ ಬಹುತೇಕ ನಾಯಕರುಗಳಿಗೆ ಅಸಮಾಧಾನವಿದೆ. ಪಕ್ಷದ ಚೌಕಟ್ಟಿನ ಅಡಿಯಲ್ಲಿ ಕೇಂದ್ರ ನಾಯಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿರುವುದಾಗಿ ತಿಳಿಸಿದರು. ಒಂದೊಮ್ಮೆ ಪಕ್ಷ ಅಧ್ಯಕ್ಷ ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನ ವಹಿಸಿದರೆ ಸಮರ್ಥವಾಗಿ ನಿಭಾಯಿಸಲು ಉತ್ಸುಕನಾಗಿದ್ದೇನೆ ಎಂದರು

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close