ಯಾವುದೇ ಸ್ಥಾನ ಖಾಲಿಯಿಲ್ಲ-ಎಂಬಿಪಾ

Surjewal is in Belgaum. Minister MB Patil said that Satish Jarakiholi and DK Shivakumar sat together and participated in the discussion about the program.

ಸುದ್ದಿಲೈವ್/ಶಿವಮೊಗ್ಗ

ಏಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಬೆಳಗಾವಿಯಲ್ಲಿದ್ದಾರೆ.‌ ಕಾರ್ಯಕ್ರಮದ ಬಗ್ಗೆ ಸತೀಶ್ ಜಾರಕಿಹೊಳಿ ಹಾಗೂ ಡಿ.ಕೆ.ಶಿವಕುಮಾರ್ ಒಟ್ಟಿಗೆ ಕುಳಿತು ಚರ್ಚೆ ನಡೆಸಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು. 

ಅವರು ಮಾಧ್ಯಮಗಳ ಜೊತೆ ಮಾತನಾಡಿ,  ನಮ್ಮ ಪಕ್ಷದಲ್ಲಿ ಹೈ ಕಮಾಂಡ್, ಇದೆ. ನಾಯಕತ್ವ ಬದಲಾವಣೆಯಾಗಲಿ,  ಅಧ್ಯಕ್ಷ ಸ್ಥಾನದ ಬದಲಾವಣೆಯಾಗಲಿ ಯಾವುದೂ ಹೈಕಮಾಂಡ್ ಮುಂದೆ ಇಲ್ಲ. ಯಾವುದೇ ಸ್ಥಾನ ಖಾಲಿಯೂ ಇಲ್ಲ. ಈಗ ಏನಿದ್ದರೂ ಬೆಳಗಾವಿಯ ಕಾರ್ಯಕ್ರಮವನ್ನ ಯಶಸ್ವಿಗೊಳಿಸುವತ್ತ ನಾಯಕರು ತಮ್ಮ ಗಮನ ಕೇಂದ್ರೀಕರಿಸಿದ್ದಾರೆ

ಸುರ್ಜೆವಾಲಾ ನೋಟಿಸ್ ನೀಡಿದ್ದಾರೆ ಎಂಬ ಮಂಜುನಾಥ ಭಂಡಾರಿ ಅವರ ಹೇಳಿಕೆ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಕಾರ್ಯಾಧ್ಯಕ್ಷರಾಗಿ ಅವರು ಹೇಳಿರಬಹುದು. ಬೇರೆ ಪಕ್ಷದ ನಾಯಕರೊಂದಿಗೆ ಊಟ ಮಾಡಿದ್ದಾರೆ ಎಂಬ ಮಾತ್ರಕ್ಕೆ ಬೇರೆ ಅರ್ಥ ಕಲ್ಪಿಸುವುದು ಸರಿಯಲ್ಲ. ಅದರಲ್ಲಿ ಯಾವುದೇ ತಪ್ಪು ಇರುವುದಿಲ್ಲ

ನಮ್ಮ ಮನೆಗೂ ಅಶೋಕ್ ಸೇರಿದಂತೆ ಬಿಜೆಪಿ ಅನೇಕ ಮುಖಂಡರು ಬಂದು ಹೋಗಿದ್ದಾರೆ.‌ ಹಾಗೆಂದ ಮಾತ್ರಕ್ಕೆ ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಸರಿಯೇ. ಹಾಗೆ ನೋಡಿದರೆ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಎಲ್ಲವೂ ಸರಿಯಾಗಿಯೇ ಇದೆ. 

165 ಕೋಟಿ ರೂ ವೆಚ್ಚಕ್ಕೆ ಒಪ್ಪಿಗೆ

ಶಿವಮೊಗ್ಗ ಏರ್ಪೋರ್ಟ್ ನೈಟ್ ಲ್ಯಾಂಡಿಂಗ್ ಫೆಸಿಲಿಟಿ ಕುರಿತಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಮೊನ್ನೆಯಷ್ಟೇ 165 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close