ಸುದ್ದಿಲೈವ್/ಶಿವಮೊಗ್ಗ
ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ "ಪ್ರಗತಿ ಪರಿಶೀಲನಾ ಸಭೆ" ನಡೆಸಲಾಯಿತು.
ರಾಜ್ಯದ ಎಲ್ಲಾ ಜಿಲ್ಲೆಗಳ ಉಪ ನಿರ್ದೇಶಕರು (ಆಡಳಿತ, ಅಭಿವೃದ್ಧಿ, ಪದವಿ ಪೂರ್ವ) ಅಧಿಕಾರಿಗಳೊಂದಿಗೆ "ಸರ್ಕಾರಿ ಶಾಲಾ-ಕಾಲೇಜುಗಳ ಸುಧಾರಣೆ" ಸೇರಿದಂತೆ ಇನ್ನೂ ಹಲವಾರು ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
"ಸಭೆಯಲ್ಲಿ ಚರ್ಚಿಸಲಾದ ವಿಷಯಗಳು"
ಸರ್ಕಾರಿ ಶಾಲೆಗಳ/ಕಾಲೇಜುಗಳ ಕೊಠಡಿಗಳ ನಿರ್ಮಾಣ,ದುರಸ್ತಿ, ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಮಕ್ಕಳು ಪರೀಕ್ಷೆಯಲ್ಲಿ ಹೆಚ್ಚಿನ ಫಲಿತಾಂಶವನ್ನು ಪಡೆಯುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವ ಕುರಿತು. ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು.
ಶಿಕ್ಷಕರ ನೇಮಕಾತಿ ಕುರಿತು. ಉಚಿತ CET, NEET ಹಾಗೂ JEE ವಿಶೇಷ ಕೋಚಿಂಗ್ ತರಬೇತಿ ಪ್ರಗತಿ ವಿವರದ ಕುರಿತು. 2025 ನೇ ಸಾಲಿನ SSLC ಹಾಗೂ PUC ಪರೀಕ್ಷೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಯಿತು. ಸೇರಿದಂತೆ ಶಿಕ್ಷಣ ಇಲಾಖೆಗೆ ಇನ್ನಿತರ ಅನೇಕ ಅಭಿವೃದ್ಧಿ ವಿಚಾರಗಳ ಕುರಿತು ವಿಡಿಯೋ ಸಂವಾದದ ಮೂಲಕ ಚರ್ಚಿಸಿಲಾಯಿತು.
ಈ ವೇಳೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ಶ್ರೀ ತ್ರಿಲೋಕ ಚಂದ್ರ, ಪದವಿಪೂರ್ವ ನಿರ್ದೇಶಕರಾದ ಶ್ರೀಮತಿ ಸಿಂಧು ಬಿ ರೂಪೇಶ್, ರಾಜ್ಯ ಯೋಜನಾ ನಿರ್ದೇಶಕರಾದ ಶ್ರೀ ಎಂ. ಕುರ್ಮರಾವ್ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.