ರಾಜ್ಯಕಾಂಗ್ರೆಸ್ ಸರ್ಕಾರರಾಜ್ಯ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರಹೊರಡಿಸಲಿ-ವಿಜೇಂದ್ರ



ಸುದ್ದಿಲೈವ್/ಶಿವಮೊಗ್ಗ

ರಾಜ್ಯ ಸರ್ಕಾರದ ವಿರುದ್ದ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಾಣಂತಿಯರ ಸರಣಿ ಸಾವು ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆದಿದೆ. 

 ಆರೋಗ್ಯ ಸಚಿವರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಸರ್ಕಾರದ ವಿರುದ್ದ ಘೋಷಣೆ ಕೂಗಲಾಯಿತು. ರಾಜ್ಯದಲ್ಲಿ ಹದಗೆಟ್ಟ ಆರೋಗ್ಯ ಇಲಾಖೆಯ ಪರಿಸ್ಥಿತಿಯನ್ನ ವಿರೋಧಿಸಿ ಬಿಜೆಪಿ ವಾಗ್ದಾಳಿ ನಡೆಸಿದೆ. 

ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ   ಬಿ. ವೈ ವಿಜಯೇಂದ್ರ ಮಾತನಾಡಿ, ರಾಜ್ಯದಲ್ಲಿ ಕಳೆದ ಆರು ತಿಂಗಳಿಂದ ಬಾಣಂತಿಯರ, ನವಜಾತ ಶಿಶುಗಳ ಸಾವಾಗುತ್ತಿದೆ. ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಗ್ರಹಣ ಹಿಡಿದಿದೆ ಎಂದು ದೂರಿದರು. 


ಕಳೆದ ಎರಡು ವರ್ಷದಲ್ಲಿ ಅಭಿವೃದ್ದಿ ಶೂನ್ಯವಾಗಿದೆ. ಸಿದ್ದರಾಮಯ್ಯ ಸಿಎಂ ಆದ ನಂತರ ಯಾವುದೇ ಅಭಿವೃದ್ದಿ ಆಗಿಲ್ಲ. ಗ್ಯಾರಂಟಿ ಕೊಟ್ಟಿದ್ದೇವೆ ಜನರು ಆರಾಮ್ ಇದ್ದಾರೆ ಎಂದು ಸರ್ಕಾರ ಅಂದುಕೊಂಡಿದೆ. ನಾನು ಸಿಎಂ ಅವರಿಗೆ ಸವಾಲು ಹಾಕಿದ್ದೇನೆ. ಆರ್ಥಿಕ ಪರಿಸ್ಥಿತಿಯ ಶ್ವೇತಪತ್ರ ಹೊರಡಿಸಬೇಕು. ಆತ್ಮಹತ್ಯೆ ಹಾಗೂ ಸಾವಿನ ಭಾಗ್ಯವನ್ನು ಈ ಸರ್ಕಾರ ಕೊಟ್ಟಿದೆ ಎಂದು ದೂರಿದರು. 

ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಸಾವಿಗೀಡಾಗಿದ್ದಾರೆ. ಸರ್ಕಾರದ ನಿರ್ಲಕ್ಷ್ಯದಿಂದ ಬಾಣಂತಿಯರ ಸಾವಾಗಿದೆ. ಈ ಹಿಂದೆ ಎಂದು ಈ ತರಹದ ದುರ್ಘಟನೆಗಳು ನಡೆದಿರಲಿಲ್ಲ. ಸಚಿವ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್ ಗೆ ಯಾವುದೇ ಸಂಬಂಧ ಇಲ್ಲದಂತೆ ವರ್ತಿಸಿದ್ದಾರೆ ಎಂದು ದೂರಿದರು. 

ಕಂದಮ್ಮಗಳ ಶಾಪ ಹಾಗೂ ಬಾಣಂತಿಯರ ಶಾಪ ಈ ಸರ್ಕಾರಕ್ಕೆ ತಟ್ಟುತ್ತದೆ. ಬಾಣಂತಿಯರ ಕುಟುಂಬಕ್ಕೆ ಕನಿಷ್ಠ 25 ಲಕ್ಷ ಪರಿಹಾರ ಕೂಡಲೇ ಬಿಡುಗಡೆ ಮಾಡಬೇಕು. ಅನಾಥರಾದ ಕಂದಮಗಳನ್ನು ಸರ್ಕಾರ ದತ್ತು ತೆಗೆದುಕೊಳ್ಳಬೇಕು. ಒಂದು ಕ್ಷಣವನ್ನು ತಡ ಮಾಡದೇ ಸರ್ಕಾರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. 

ಕೇಂದ್ರದ ಮಾನವ ಹಕ್ಕು ಆಯೋಗಕ್ಕೂ ನಾನು ಪತ್ರ ಬರೆಯುತ್ತೇನೆ. ಕೇಂದ್ರದ ಮಾನವ ಹಕ್ಕು ಆಯೋಗಕ್ಕೆ ಪತ್ರ ಬರೆದು ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ. ಎಚ್ಚೆತ್ತು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಸಿಎಂ ನಾಲಾಯಕ್ ಮಂತ್ರಿಗಳ ರಾಜೀನಾಮೆ ಪಡೆದುಕೊಳ್ಳಬೇಕು ಎಂದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close