ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗ ಮಹಾನಗರ ಪಾಲಿಕೆಯ ಚುನಾವಣೆಯನ್ನ 6 ತಿಂಗಳಲ್ಲಿ ಪೂರೈಸುವಂತೆ ಒತ್ತಾಯಿಸಿ ಇಂದು ಶಾಸಕ ಚೆನ್ನಬಸಪ್ಪನವರ ನೇತೃತ್ವದಲ್ಲಿ ಬೆಂಗಳೂರಿನ ರಾಜ್ಯ ಚುನಾವಣಾ ಆಯೋಗಕ್ಕೆ ಭೇಟಿ ನೀಡಿ ಚುನಾವಣೆ ಆಯೋಗಕ್ಕೆ ಮನವಿ ಸಲ್ಲಿಸಲಾಯಿತು.
ಸದಸ್ಯರ ಅವಧಿಯು 2023 ನವಂಬರ್ ನಲ್ಲಿ ಮುಕ್ತಾಯಗೊಂಡಿದ್ದು, ಒಂದು ವರ್ಷದಿಂದ ಚುನಾಯಿತ ಆಡಳಿತ ಮಂಡಳಿ ಇಲ್ಲದ ಕಾರಣ ಹಾಗೂ ಜನರ ಸಮಸ್ಯೆಗಳನ್ನು ಪಾಲಿಕೆಯಲ್ಲಿ ಆಲಿಸಿ ಪರಿಹಾರ ಕಂಡುಕೊಳ್ಳಲು ಹಾಗೂ ನಗರದ ಅಭಿವೃದ್ಧಿ ವಿಚಾರಗಳ ಬಗ್ಗೆ ತ್ವರಿತ ಕ್ರಮ ಕೈಗೊಳ್ಳುವ ಹಿತದೃಷ್ಟಿಯಿಂದ ತ್ವರಿತವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿಎಸ್ ಅರುಣ್, ಭಾರತಿ ಶೆಟ್ಟಿ ಹಾಗೂ ಡಾ. ಧನಂಜಯ್ ಸರ್ಜಿ ಶಿವಮೊಗ್ಗ ಮಹಾನಗರ ಪಾಲಿಕೆಯ ಮಾಜಿ ಸದಸ್ಯರುಗಳು ಹಾಗೂ ಶಿವಮೊಗ್ಗ ನಗರ ಮಂಡಲ ಬಿಜೆಪಿ ಮುಖಂಡರುಗಳು, ಕಾರ್ಯಕರ್ತರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.