ಅಡುಗೆ ಭಟ್ಟರ ಹಾಗೂ ಕೃಷಿಕರ ಮಕ್ಕಳ ಸಾಧನೆ

College of Agriculture and Horticulture, Iruvakki, Sagar, held its 9th year convocation. Children's achievement in the convocation seems to be rare.


ಸುದ್ದಿಲೈವ್/ಸಾಗರ

ಸಾಗರದ ಇರುವಕ್ಕಿಯಲ್ಲಿರುವ ಕೃಷಿ ಮತ್ತು ತೋಟಗಾರಿಕೆ ಕಾಲೇಜಿನ 9 ನೇ ವರ್ಷದ ಘಟಿಕೋತ್ಸವ ನಡೆದಿದೆ. ಘಟಿಕೋತ್ಸವದಲ್ಲಿ ಮಕ್ಕಳ ಸಾಧನೆ ಅಪರೂಪವೆನಿಸಿದೆ.


ಅಡುಗೆ ಭಟ್ಟರ ಪುತ್ರಿಗೆ ೪ ಚಿನ್ನದ ಪದಕ: 


ಶಿವಮೊಗ್ಗ ರವೀಂದ್ರನಗರದ ಗಣಪತಿ ದೇವಸ್ಥಾನದ ಅಡುಗೆ ಭಟ್ಟ ಸುರೇಶ್-ಸುಧಾ ದಂಪತಿ ಪುತ್ರಿ ಎನ್.ಎಸ್.ಸಂಜೀತಾ ಅವರು ೨೦೨೨-೨೩ನೇ ಸಾಲಿನ ನಾಲ್ಕು ಪದಕಕ್ಕೆ ಮುತ್ತಿಟ್ಟರು. ಕಾಶಿಪುರದ ಸಂಜೀತಾ ಅವರು ಬೆಂಗಳೂರಿನ ಜಿಕೆವಿಕೆಯ ಚಿಂತಾಮಣಿ ಕ್ಯಾಂಪಸ್ ನಲ್ಲಿ ಕೃಷಿ ಕೀಟ ಶಾಸ್ತ್ರದಲ್ಲಿ ಎಂಎಸ್ಸಿ ಮಾಡುತ್ತಿದ್ದಾರೆ. ಮುಂದೆ ಪಿಎಚ್ ಡಿ ಮಾಡುವ ಗುರಿ ಹೊಂದಿದ್ದಾರೆ. ರೈತರಿಗೆ ಒಳ್ಳೆಯದನ್ನು ಮಾಡುವ ಗುರಿ ಹೊಂದಿದ್ದಾರೆ. 


ಕೃಷಿಕರ ಮಗಳಿಗೆ ಮೂರು ಚಿನ್ನದ ಪದಕ:


ತುಮಕೂರು ಜಿಲ್ಲೆ ಶಿರಾ ತಾಲೂಕಿನ ಗೌಡರಗೆರೆಯ ಜಿ.ಎಸ್.ಪೂರ್ಣಿಮಾ ೨೦೨೩-೨೪ನೇ ಸಾಲಿನಲ್ಲಿ ಮೂರು ಚಿನ್ನದ ಪದಕ ಪಡೆದಿದ್ದಾರೆ. ಜಿ.ಪಿ.ಹನುಮಂತ-ಎಲ್‌.ಆರ್.ರಾಜೇಶ್ವರಿ ದಂಪತಿ ಪುತ್ರಿಯಾಗಿದ್ದು ಜೆನಿಟಿಕ್ ಆ್ಯಂಡ್ ಪ್ಲ್ಯಾನ್ ಬೀಡಿಂಗ್ ವಿಷಯದಲ್ಲಿ ಎಂಎಸ್ಸಿ ಮಾಡುತ್ತಿದ್ದಾರೆ. ಸಂಶೋಧನೆಯಲ್ಲಿ ಮುಂದುವರಿಯುವ ಇಂಗಿತವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಒಂದು ತಿಂಗಳು ಸಂಶೋಧನೆಗಾಗಿ ಬ್ಯಾಂಕಾಕ್ ಗೂ ಹೋಗಿ ಅಧ್ಯಯನ ಮಾಡಿಕೊಂಡು ಬಂದಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close