ಹುಲಿಕಲ್ ಘಾಟಿಯಲ್ಲಿ ಉರುಳಿಬಿದ್ದ ಬಸ್



ಸುದ್ದಿಲೈವ್/ಶಿವಮೊಗ್ಗ

ತಾಲೂಕಿನ ಹುಲಿಕಲ್ ಘಾಟ್ ರಸ್ತೆ ತಿರುವಿನಲ್ಲಿ ಸಂಚರಿಸುತ್ತಿದ್ದ ಬಸ್ ಬ್ರೇಕ್ ವಿಫಲವಾಗಿ (break fail) 60 ಅಡಿ ಆಳದ ಪ್ರಪಾತಕ್ಕೆ ಉರುಳಿದೆ.

ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ದುರ್ಗಾಂಬಾ ಬಸ್‌ ಭಾನುವಾರ ತಡರಾತ್ರಿ(late Night) 1.45ಕ್ಕೆ ಘಾಟಿ ರಸ್ತೆಯ ಶಿವಮೊಗ್ಗ ಜಿಲ್ಲೆ ಗಡಿ ಭಾಗದ ತಿರುವಿನಲ್ಲಿ ಬ್ರೇಕ್ ವಿಫಲವಾಗಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಬಸ್ಸಿನಲ್ಲಿ 45 ಪ್ರಯಾಣಿಕರಿದ್ದರು. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆ ಇಕ್ಕೆಲಗಳಲ್ಲಿ ತಡೆಗೋಡೆ ಇಲ್ಲ. ಪಟ್ಟಿ ತರದ ಪ್ಲೇಟ್ ಅಳವಡಿಸಲಾಗಿದ್ದು, ಇದ್ದೂ ಇಲ್ಲದಂತಾಗಿದೆ. ಇದರಿಂದ ಹೆಚ್ಚಿನ ಅಪಘಾತ ಸಂಭವಿಸುತ್ತಿವೆ. ಉತ್ತಮ ತಡೆಗೋಡೆ ಇದ್ದಿದ್ದರೆ ಅಪಘಾತ ಸಂಭವಿಸುತ್ತಿರಲಿಲ್ಲ ಎಂದು ಆರೋಪಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close