ವ್ಯಾಪಾರಿ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಿ

Traders Association President AH Sunil is in the city to arrest the accused who assaulted the shopkeeper of Gandhi Bazaar and take strict action against them, on the other hand, a delegation of SP Mithun Kumar led by former DCM Eshwarappa met.

ಸುದ್ದಿಲೈವ್/ಶಿವಮೊಗ್ಗ

ಗಾಂಧಿ ಬಜಾರ್ ನ ವ್ಯಾಪಾರಿ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಗಾಂಧಿಬಜಾರ್ ಕಟ್ಟಡ ಮಾಲೀಕರ ಹಾಗೂ ವರ್ತಕರ ಸಂಘದ ಅಧ್ಯಕ್ಷ ಎ.ಎಚ್.ಸುನೀಲ್ ಆಗ್ರಹಿಸಿದರೆ, ಇನ್ನೊಂದು ಕಡೆ ಮಾಜಿ ಡಿಸಿಎಂ ಈಶ್ವರಪ್ಪನವರ ನೇತೃತ್ವದಲ್ಲಿ ಎಸ್ಪಿ ಮಿಥುನ್ ಕುಮಾರ್ ಅವರನ್ನ ನಿಯೋಗ ಭೇಟಿ ಮಾಡಿದೆ. 



ಗಾಂಧಿ ಬಜಾರ್‌ನಲ್ಲಿ ಕಚೋರಿ ವ್ಯಾಪಾರಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಗಾಂಧಿಬಜಾರ್ ಕಟ್ಟಡ ಮಾಲೀಕರ ಹಾಗೂ ವರ್ತಕರ ಸಂಘದ ಅಧ್ಯಕ್ಷ ಎ.ಎಚ್.ಸುನೀಲ್ ಆಗ್ರಹಿಸಿದ್ದಾರೆ.

ಗಾಂಧಿಬಜಾರ್ ಸೇರಿ ವಿವಿಧೆಡೆ ಕ್ಷುಲ್ಲಕ ಕಾರಣಕ್ಕೆ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಯುತ್ತಿರುವುದು ಖಂಡನೀಯ. ಕೆಲವೆಡೆ ವ್ಯಾಪಾರಿಗಳಿಗೆ ಬೆದರಿಕೆ ಹಾಕುವುದು ಸಹ ನಡೆಯುತ್ತಿದೆ. ವ್ಯಾಪಾರಿಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಗಾಂಧಿ ಬಜಾರ್‌ನಲ್ಲಿ ವ್ಯಾಪಾರಿಗಳ ಸುರಕ್ಷತೆಗೆ ಸಂಬಂಧಿಸಿ ಪೊಲೀಸ್ ಉಪಠಾಣೆ ಸ್ಥಾಪಿಸಬೇಕು. ನಿರಂತರವಾಗಿ ಪೊಲೀಸ್ ಬೀಟ್ ವ್ಯವಸ್ಥೆ ಕಲ್ಪಿಸಬೇಕು. ಗಾಂಧಿಬಜಾರ್‌ನಲ್ಲಿ ವ್ಯಾಪಾರಿಗಳ ಸುರಕ್ಷತೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.

ಕಚೋರಿ ವ್ಯಾಪಾರಿ ಮೇಲೆ ಹಲ್ಲೆ ಮಾಡಿರುವ ಎಲ್ಲ ಆರೋಪಿಗಳನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಗಾಂಧಿಬಜಾರ್‌ನಲ್ಲಿ ಪೊಲೀಸ್ ಉಪಠಾಣೆ ಸ್ಥಾಪಿಸುವಂತೆ ಗಾಂಧಿಬಜಾರ್ ಕಟ್ಟಡ ಮಾಲೀಕರ ಹಾಗೂ ವರ್ತಕರ ಸಂಘದ ಅಧ್ಯಕ್ಷ ಎ.ಎಚ್.ಸುನೀಲ್ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close