ಸುದ್ದಿಲೈವ್/ಶಿವಮೊಗ್ಗ
ಭದ್ರಾ ಜಲಾಶಯದ ಎಡದಂಡೆ ಮತ್ತು ಬಲದಂಡೆ ನಾಲೆಗಳಲ್ಲಿ ನೀರು ಹರಿಸಲು ದಿನಾಂಕ ನಿಗದಿಪಡಿಸಲಾಗಿದೆ. ಜ.4ರಿಂದ ಎಡದಂಡೆ ಮತ್ತು ಜ.8ರಿಂದ ಬಲದಂಡೆ ನಾಲೆಗೆ ನೀರು ಹರಿಸಲು ನಿರ್ಧರಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭದ್ರ ಕಾಡಾ ಅಧ್ಯಕ್ಷ ಡಾ. ಅಂಶುಮಂತ್, ಭದ್ರಾ ಜಲಾಶಯದ ನಾಲೆಗಳಿಗೆ ನಿರಂತರವಾಗಿ 120 ದಿನ ನೀರು ಹರಿಸಲಾಗುತ್ತದೆ. ನಾಲೆಗಳ ಮೂಲಕ ಒಟ್ಟು 32 ಟಿಎಂಸಿ ನೀರು ಹರಿಸಲಾಗುತ್ತದೆ. ಎಡದಂಡೆ ನಾಲೆಗೆ 380 ಕ್ಯೂಸೆಕ್, ಬಲದಂಡೆಗೆ 2650 ಕ್ಯೂಸೆಕ್ ನೀರು ಹರಿಸಲಾಗುತ್ತದೆ ಎಂದು ತಿಳಿಸಿದರು.
ಪ್ರಸ್ತುತ ಜಲಾಶಯದಲ್ಲಿ 66.964 ಟಿಎಂಸಿ ನೀರು ಸಂಗ್ರಹವಿದೆ ಎಂದು ತಿಳಿಸಿದರು.
ಅಮೆರಿಕದಿಂದ ಆನ್‌ಲೈನ್ ಮೂಲಕ ಸಚಿವ ಮಧು ಬಂಗಾರಪ್ಪ ಸಭೆಯಲ್ಲಿ ಭಾಗವಹಿಸಿದ್ದರು. ವಿಧಾನ ಪರಿಷತ್ ಸದಸ್ಯೆ ಬಲ್ಕಿಸ್ ಬಾನು, ಕಾಡಾ ಆಡಳಿತಾಧಿಕಾರಿ ಸತೀಶ್, ತಾಂತ್ರಿಕ ವಿಭಾಗದ ಎಲ್‌ಡಿಒ ಪ್ರಶಾಂತ್, ನೀರಾವರಿ ಇಲಾಖೆ ಅಧಿಕಾರಿಗಳು ಇದ್ದರು. ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ಕೂಡ ಆನ್‌ಲೈನ್‌ನಲ್ಲಿ ಭಾಗವಹಿಸಿದ್ದರು.
ರೈತರು ಯಾವುದೆ ವದಂತಿಗೆ ಕಿವಿಗೊಡದೆ ಉತ್ತಮ ಬೆಳೆ ಬೆಳೆಯಬಹುದು. ರೈತರಿಗೆ ಯಾವುದೆ ತೊಂದರೆ ಆಗದಂತೆ ನೀರು ಹರಿಸುವಂತೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ, ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
– ಡಾ.ಅಂಶುಂತ್, ಭದ್ರಾ ಕಾಡ ಅಧ್ಯಕ್ಷ