ಸುದ್ದಿಲೈವ್/ತುಮಕೂರು
ಜನವರಿ 18-19 ರಂದು ತುಮಕೂರಿನಲ್ಲಿ ನಡೆದ 39ನೇ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನದಲ್ಲಿ ಗ್ರಾಮೀಣ ಭಾಗದ ಜನಪರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಅತ್ಯುತ್ತಮ ವರದಿಗಾಗಿ ತಾಲೂಕಿನ ಹಿರಿಯ ಪತ್ರಕರ್ತ ರವಿ ಬಿದನೂರು ಅವರಿಗೆ ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿಗೆ ಭಾಜನರಾದ ರವಿ ಬಿದನೂರು ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ. ರವಿ ಬಿದನೂರು ಅವರು ಹೊಸನಗರ ತಾಲೂಕಿನ ನಗರ ಹೋಬಳಿಯ ಪತ್ರಕರ್ತರಾಗಿ ಗುರುತಿಸಿಕೊಂಡು ಗ್ರಾಮೀಣ ಭಾಗದ ಜನಪರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದ್ದರು. ನಿನ್ನೆ ತುಮಕೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಸಮ್ಮೇಳನದಲ್ಲಿ ಬಿದನೂರು ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಮೊದಲು ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ, ಆರಗ ಜ್ಞಾನೇಂದ್ರ, ಶಾಸಕ ಗೋಪಾಲಕೃಷ್ಣ ಬೇಳೂರು, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥ ಗೌಡ, ಶಿಮುಲ್ ಅಧ್ಯಕ್ಷ ಗುರುಶಕ್ತಿ ವಿದ್ಯಾಧರ್ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಪ್ರಶಂಸೆ ವ್ಯಕ್ತಪಡಿಸಿವೆ.