ಎಂಬಿಬಿಎಸ್ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವು

A medical student died in an accident near Barandur here on Saturday evening.


ಸುದ್ದಿಲೈವ್/ಭದ್ರಾವತಿ

ಇಲ್ಲಿನ ಬಾರಂದೂರು ಬಳಿಯಲ್ಲಿ ಶನಿವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ  ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿರುವ  ಘಟನೆ ನಡೆದಿದೆ.

ಹೆದ್ದಾರಿಯ ಬಾರಂದೂರು ಬಳಿಯಲ್ಲಿ ಕಾರು ಹಾಗೂ ಟ್ರಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ವಿದ್ಯಾರ್ಥಿನಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದಾರೆ.

ತರೀಕೆರೆಯ ಅಮೃತಾಪುರ ಮೂಲದ ಮೃತ ವಿದ್ಯಾರ್ಥಿನಿ ಕೃತಿ (21) ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಕಲಿಯುತ್ತಿದ್ದರು ಎಂದು ಹೇಳಲಾಗಿದೆ. ಅಪಘಾತದ ತೀವ್ರತೆಗೆ ಟ್ರಾಕ್ಟರ್ ಪಲ್ಟಿಯಾಗಿದೆ. ಕಾಗದ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಂತಿಮ ವೈದ್ಯಕೀಯನಲ್ಲಿ ಓದುತ್ತಿದ್ದ ಕೃತಿಯನ್ನ ಸಂಬಂಧಿಕರು ಶಿವಮೊಗ್ಗಕ್ಕೆ ಬಂದು ಕರೆದುಕೊಂಡು ಹೋಗುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close