Suddilive || Shivamogga
ಸ್ಥಳೀಯ ಸಂಸ್ಥೆ ಚುನಾವಣೆಗೆ ಸಜ್ಜಾಗಲು ಸಚಿವ ಮಧು ಬಂಗಾರಪ್ಪ ಕರೆ -Minister Madhu Bangarappa calls for preparations for local body elections
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ ಚುನಾವಣೆಯನ್ನು ಪರಿಣಾಮಕಾರಿಯಾಗಿ ಒಗ್ಗಟ್ಟಿನಿಂದ ಎದುರಿಸಲು ಸಚಿವ ಎಸ್ ಮಧು ಬಂಗಾರಪ್ಪ ಕರೆ ನೀಡಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಬೃಹತ್ ಸಭೆಯಲ್ಲಿ ಭಾಗವಹಿಸಿ "ಪಕ್ಷದ ಸಂಘಟನೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಡಿ ಚುನಾವಣೆ ಗೆಲ್ಲುವ" ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು.
ಮಹಾನಗರ ಪಾಲಿಕೆಯ ಅಧಿಕಾರವನ್ನು ಹಿಡಿಯುತ್ತ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಡಬೇಕು ಪಕ್ಷ ಹಾಗೂ ನಾನು ವೈಯಕ್ತಿಕವಾಗಿ ನಿಮ್ಮ ಗೆಲುವಿಗೆ ಜೊತೆಯಲ್ಲಿ ಇರುತ್ತೇನೆ. ಪಕ್ಷದ ಗ್ಯಾರಂಟಿ ಕಾರ್ಯಕ್ರಮದ ಜೊತೆಗೆ ಮಹಾನಗರದ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸುವಂತಹ ಕಾರ್ಯಕರ್ತರು ಶ್ರಮಿಸಬೇಕು ಎಂದು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಕಾರ್ಯಕರ್ತರಲ್ಲಿ ವಿನಂತಿಸಿದರು.
ಕಾರ್ಯಕರ್ತರೇ ನಮ್ಮ ಪಕ್ಷದ ಜೀವಾಳ....
ನಮ್ಮ ಪಕ್ಷದ ಕಾರ್ಯಕರ್ತರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ಹಾಗೆಯೇ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ತಮ್ಮ ತಮ್ಮ ಬೂತ್ ಮಟ್ಟದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಮುಂದಿನ ದಿನಗಳಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು.
ಕಾಂಗ್ರೆಸ್ ಪಕ್ಷ ಶಿಸ್ತಿನ ಪಕ್ಷ ಆಗಿರುವುದರಿಂದ ಮುಂದಿನ ದಿನಗಳಲ್ಲಿ ಗ್ರಾ.ಪಂ, ತಾ.ಪಂ, ಜಿ.ಪಂ, ಪ.ಪಂ, ನಗರಸಭೆ, ಪುರಸಭೆ, ಮಹಾನಗರ ಪಾಲಿಕೆಗಳಿಗೆ ಪಕ್ಷ ಯಾರಿಗೆ ಟಿಕೆಟ್ ನೀಡಿದರು ಬೆಂಬಲಿಸಬೇಕು.
ಅಭ್ಯರ್ಥಿಗಳನ್ನ ಹೆಚ್ಚಿನ ಅಂತರದಲ್ಲಿ ಗೆಲ್ಲಿಸಬೇಕು. ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ನಿರಂತರವಾಗಿರಬೇಕು. ಪಕ್ಷದ ಚೌಕಟ್ಟಿನಲ್ಲಿ ಒಗ್ಗಟ್ಟಾಗಿ ಪಕ್ಷವನ್ನು ಇನ್ನಷ್ಟು ಸಂಘಟಿಸಿ ಬಲಪಡಿಸಬೇಕು ಇವತ್ತು ರಾಜ್ಯದಲ್ಲಿ ಅಧಿಕಾರಿಕ ಬರಲು ಕಾರ್ಯಕರ್ತರ ಶ್ರಮ ಅನನ್ಯವಾಗಿದೆ. ನಿಮ್ಮ ಶ್ರಮ ವ್ಯರ್ಥವಾಗಲು ಬಿಡುವುದಿಲ್ಲ. ಮುಂದಿನ ಚುನಾವಣೆಗಳು ಕಾರ್ಯಕರ್ತರ ಚುನಾವಣೆ ನಮ್ಮೆಲ್ಲರ ಹೊಣೆಯಾಗಿದೆ. ನಿಮ್ಮೆಲ್ಲರ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸುತ್ತೇವೆ ಎಂದು ನುಡಿದರು.
ಈ ಸಂದರ್ಭದಲ್ಲಿ ಚುನಾವಣೆಗೆ ಬೇಕಾದ ಪೂರ್ವ ತಯಾರಿಗಳ ಬಗ್ಗೆ ಕಾರ್ಯಕರ್ತರು ಹಾಗೂ ಮುಖಂಡರ ಮಾರ್ಗದರ್ಶನ ಹಾಗೂ ಸಲಹೆಗಳನ್ನು ಪಡೆಯಲಾಯಿತು.
ಈ ವೇಳೆ ಜಿಲ್ಲಾಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್ ಎಚ್ ಎಮ್ ಚಂದ್ರಶೇಖರಪ್ಪ ಇಸ್ಮಾಯಿಲ್ ಖಾನ್ ಹೆಚ್ಎಸ್ ಸುಂದರೇಶ್ ಎಂ ಶ್ರೀಕಾಂತ್ ಹೆಚ್ ಸಿ ಯೋಗೇಶ್ ಎನ್ ರಮೇಶ್ ಎನ್ ರವಿಕುಮಾರ್ ಎಸ್ ಕೆ ಮರಿಯಪ್ಪ ಚಂದ್ರ ಭೂಪಾಲ್ ಕಲೀಮ್ ಪಾಷಾ ಶಿವಕುಮಾರ್ ವಿವಿಧ ವಿಭಾಗಗಳ ಅಧ್ಯಕ್ಷರುಗಳು ಪಕ್ಷದ ಮುಖಂಡರು ಕಾರ್ಯಕರ್ತರು, ಜನಪ್ರತಿನಿಧಿಗಳು, ಮಹಿಳಾ ಮುಖಂಡರು ಹಾಗೂ ಯುವ ಕಾಂಗ್ರೆಸ್ ಮುಖಂಡರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.
Minister Madhu Bangarappa calls for preparations for local body elections