suddilive || Shivamogga
ರೌಡಿ ಶೀಟರ್ ಕಡೇಕಲ್ ಅಬೀದ್ ಕಾಲಿಗೆ ಗುಂಡೇಟು! Rowdy sheeter Kadekal Abid shot in the leg
ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದ ರೌಡಿ ಶೀಟರ್ ಕಡೇಕಲ್ ಅಬೀದ್ ಕಾಲಿಗೆ ಗುಂಡು ಹಾರಿಸಲಾಗಿದೆ. ಪೇಪರ್ ಟೌನ್ ಇನ್ಸ್‌ಪೆಕ್ಟರ್ ನಾಗಮ್ಮ, ರೌಡಿ ಶೀಟರ್ ಕಡೇಕಲ್ ಅಬೀದ್ ಕಾಲಿಗೆ ಗುಂಡು ಹಾರಿಸಿದ್ದಾರೆ
ಒಂದು ತಿಂಗಳ ಹಿಂದೆ ಭದ್ರಾವತಿಯಲ್ಲಿ ಶಿವಮೊಗ್ಗದ ನಿವಾಸಿ ಸಾತು ಎಂಬಾತರ ಕೊಲೆ ಯತ್ನ ಪ್ರಕರಣದರಲ್ಲಿ ರೌಡಿ ಶೀಟರ್ ಕಡೇಕಲ್ ಅಬೀದ್ ತಲೆ ಮರೆಸಿಕೊಂಡಿದ್ದ. ಕಳೆದ ಒಂದು ತಿಂಗಳಿನಿಂದ ಈತನಿಗಾಗಿ ಪೊಲೀಸರು ಶೋಧಿಸುತ್ತಿದ್ದರು. ಇಂದು ಈತನ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಇನ್ಸ್‌ಪೆಕ್ಟರ್ ನಾಗಮ್ಮ ನೇತೃತ್ವದ ತಂಡ ಬಂಧಿಸಲು ಯತ್ನಿಸಿತು. ಈ ಸಂದರ್ಭ ಕಡೇಕಲ್ ಅಬೀದ್ ಪೊಲೀಸ್ ಸಿಬ್ಬಂದಿ ಅರುಣ್ ಮೇಲೆ ದಾಳಿ ನಡೆಸಿದ್ದಾನೆ ಎಂದು ಜಿಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ವಾಟ್ಸಪ್‌ನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
![]() |
ಸಿಬ್ಬಂದಿ ಅರುಣ್ |
ಪೊಲೀಸ್ ಸಿಬ್ಬಂದಿ ಅರುಣ್ ಮೇಲೆ ದಾಳಿ ನಡೆಸಿ ಕಡೇಕಲ್ ಅಬೀದ್ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಇನ್ಸ್‌ಪೆಕ್ಟರ್ ನಾಗಮ್ಮ, ಕಡೇಕಲ್ ಅಬೀದ್‌ನ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡಿರುವ ಪೊಲೀಸ್ ಸಬ್ಬಂದಿ ಅರುಣ್ ಕುಮಾರ್ ಮತ್ತು ಕಡೇಕಲ್ ಅಬೀದ್‌ನನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಡೇಕಲ್ ಅಬೀದ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ರಾಬರಿ, ಕೊಲೆ ಯತ್ನ ಸೇರಿ ಒಟ್ಟು 20 ಪ್ರಕರಣಗಳಿವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
Rowdy sheeter Kadekal Abid shot in the leg