Suddilive || Shikaripura
ಗಾಂಜಾ ದಾಳಿ ಮೂವರ ಬಂಧನ-Three arrested in Ganja raid
ಕೆಸರಗಟ್ಟೆ ಮೀಸಲು ಅರಣ್ಯ ಪ್ರದೇಶದ ಸೇತುವೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ವೇಳೆ ಶಿಕಾರಿಪುರ ಗ್ರಾಮಾಂತರ ಪೊಲೀಸರು ಖಡಕ್ ದಾಳಿ ನಡೆಸಿದ್ದಾರೆ. ನಾಲ್ವರು ಆರೋಪಿಗಳನ್ನಬಂಧಿಸಿ 2 ಕೆಜಿ 72 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಸರಗಟ್ಟೆ ಮೀಸಲು ಅರಣ್ಯ ಪ್ರದೇಶದ ಸೇತುವೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಮಿಥುನ್ ಕುಮಾರ್ ಜಿ. ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಅನಿಲ್ ಕುಮಾರ್ ಭುಮರಡ್ಡಿ, ಹೆಚ್ಚುವರಿ ಪೊಲೀಸ್ ಅಧಿಕ್ಷಕರು-1, ಶಿವಮೊಗ್ಗ ಜಿಲ್ಲೆ ಮತ್ತು ಕಾರಿಯಪ್ಪ ಎ ಜಿ. ಹೆಚ್ಚುವರಿ ಪೊಲೀಸ್ ಅಧಿಕ್ಷಕರು-2, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಕೃಷ್ಣಮೂರ್ತಿ ಕೆ ಪೊಲೀಸ್ ಉಪಾಧೀಕ್ಷಕರು ಸಿಇಎನ್ ಕ್ರೈಂ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿದ್ದಾರೆ.
ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿರಾದ 1) ಮೊಹಮ್ಮದ್ ಮುಸೇಬ್, 23 ವರ್ಷ, ಮಲ್ಲಾಪುರ ಗ್ರಾಮ, ಶಿಕಾರಿಪುರ 2) ಹಜರತ್ ಉಸ್ಮಾನ್, 26 ವರ್ಷ, ಮಲ್ಲಾಪುರ ಗ್ರಾಮ, ಶಿಕಾರಿಪುರ 3) ಸಲ್ಮಾನ್ ಇ, 28 ವರ್ಷ, ಅಣ್ಣಾನಗರ 07ನೇ ಕ್ರಾಸ್, ಶಿವಮೊಗ್ಗ, 4) ಮೊಹಮ್ಮದ್ ಕೈಫ್, 21 ವರ್ಷ, ಜಟ್ಪಟ್ ನಗರ, ಶಿಕಾರಿಪುರ ಟೌನ್, ಇವರನ್ನು ದಸ್ತಗಿರಿ ಮಾಡಿ, ಆರೋಪಿತರಿಂದ ಅಂದಾಜು ಮೌಲ್ಯ 70,000/- ರೂಗಳ 2 ಕೆಜಿ 52 ಗ್ರಾಂ ತೂಕದ ಒಣ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಡಿಜೈರ್ ಕಾರ್ ಮತ್ತು ಹೊಂಡಾ ಶೈನ್ ಬೈಕ್ ನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ.
ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.