ಯಶಸ್ವಿನಿ ಯೋಜನೆಯಡಿ ನೋಂದಣಿಗೆ ಅವಕಾಶ-Yashaswini scheme

 Suddilive|| Shivamogga

ಯಶಸ್ವಿನಿ ಯೋಜನೆಯಡಿ ನೋಂದಣಿಗೆ ಅವಕಾಶ-Registration is allowed under the Yashaswini scheme

Yashaswini, scheme

ಸಹಕಾರ ಇಲಾಖೆಯು 2024-25ನೇ ಸಾಲಿಗೆ ಯಶಸ್ವಿನಿ ಯೋಜನೆಯಡಿ ಫಲಾನುಭವಿಗಳನ್ನು ನೋಂದಾಯಿಸಿಕೊಳ್ಳುವಂತೆ ತಿಳಿಸಿದ್ದು, ಮಾ.31 ಕೊನೆಯ ದಿನಾಂಕವಾಗಿದೆ. 

ಈ ಯೋಜನೆಯಡಿ ಮುಖ್ಯವಾಗಿ ಹೃದಯಕ್ಕೆ ಸಂಬಂಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ ಖಾಯಿಲೆಗಳು, ಕಣ್ಣಿನ ಖಾಯಿಲೆಗಳು, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದ ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಸಹಕಾರಿಗಳಿಗೆ ಒದಗಿಸಲಾಗುವುದು. ಈ ಯೋಜನೆಯಡಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ. 5.00 ಲಕ್ಷಕ್ಕೆ ನಿಗದಿಪಡಿಸಲಾಗಿದ್ದು, 1 ಏಪ್ರಿಲ್ 2025 ರಿಂದ 31 ಮಾರ್ಚ್ 2026ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ. ಜಿಲ್ಲೆಯ ಸಹಾಕರ ಸಂಘಗಳ ಸದಸ್ಯರುಗಳು ಯಶಸ್ವಿನ ಯೋಜನೆಯಡಿ ಮಾ.31 ರೊಳಗಾಗಿ ನೊಂದಾಯಿಸಿಕೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಸಹಕಾರ ಸಂಘಗಳ ಉಪನಿಬಂಧಕ ನಾಗಭೂಷಣ್ ಚಂದ್ರಶೇಖರ್ ಕಲ್ಮನೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸಹಕಾರ ಸಂಘಗಳನ್ನು ಹಾಗೂ ಯಶಸ್ವಿನಿ ಕೋ ಆರ್ಡಿನೇಟರ್ ಹರೀಶ್ – 9739588777 ಇವರನ್ನು ಸಂಪರ್ಕಿಸುವುದು. 

ವಿ.ಸೂ.: ಪರಿಶಿಷ್ಟ ಜಾತಿ/ಪಂಗಡದ ಸದಸ್ಯರು ಕುಟುಂಬದ ಪ್ರತಿಯೊಬ್ಬರ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು.

Yashaswini scheme

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close