Suddilive || Shivamogga
ಹಣಗೆರೆಕಟ್ಟೆಯ ತ್ರೈಮಾಸಿಕ ಕಾಣಿಕೆ ಎಣಿಕೆ-ಸಂಗ್ರಹದ ಮೊತ್ತವೆಷ್ಟು?What is the amount of the quarterly donation count-collection for the Hangarekatte?
ತಾಲೂಕಿನ ಧಾರ್ಮಿಕ ಕೇಂದ್ರಗಳಲ್ಲಿ ಸೌಹಾರ್ದ ಕೇಂದ್ರ ಎಂದೇ ಬಿಂಬಿತವಾಗಿರುವ ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿದ ಹಜರತ್ ಸೈಯದ್ ಸಾದತ್ ದರ್ಗಾ ಮತ್ತು ಭೂತರಾಯ ಚೌಡೇಶ್ವರಿ ದೇವಸ್ಥಾನದಲ್ಲಿ ತಹಸೀಲ್ದಾರ್ ರಂಜಿತ್ ರವರ ನೇತೃತ್ವದಲ್ಲಿ ಹುಂಡಿಯ ಹಣ ಎಣಿಸುವ ಕಾರ್ಯ ನಡೆದಿದ್ದು ಈ ಬಾರಿಯೂ ಲಕ್ಷಗಟ್ಟಲೆ ಹಣ ಸಂಗ್ರಹವಾಗಿದೆ.
ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಹಜರತ್ ಸೈಯದ್ ಸಾದತ್ ದರ್ಗಾ ಮತ್ತು ಭೂತರಾಯ ಚೌಡೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕವಾಗಿ 2 ಕೋಟಿ ರೂಪಾಯಿಗೂ ಹೆಚ್ಚು ಹುಂಡಿ ಹಣ ಸಂಗ್ರಹವಾಗುತ್ತಿದೆ. ತ್ರೈಮಾಸಿಕ ಎಣಿಕೆಯಲ್ಲಿ ಸರಾಸರಿ 50 ಲಕ್ಷ ಹಣ ಸಂಗ್ರಹಣೆಯಾಗುತ್ತಿದೆ. ಅದರಲ್ಲೂ ರಾಜ್ಯದಲ್ಲಿಯೇ ಅತೀ ಹೆಚ್ಚು ಹುಂಡಿಹಣ ಸಂಗ್ರಹವಾಗುವ ಮುಜರಾಯಿ ದೇವಸ್ಥಾನಗಳಲ್ಲಿ ತಾಲೂಕಿನ ಹಣಗೆರೆಕಟ್ಟೆ ದೇವಸ್ಥಾನ ಕೂಡ ಒಂದಾಗಿದೆ.
ಈ ಬಾರಿ ಹುಂಡಿ ಎಣಿಕೆಯಲ್ಲಿ ಎಪ್ಪತ್ಮೂರು ಲಕ್ಷದ ಇಪ್ಪತ್ತೈದು ಸಾವಿರದ ಒಂಬೈನೂರ ಹತ್ತು ರೂಗಳು ( 73,25,910) ಸಿಕ್ಕಿದೆ. ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ದೇವಸ್ಥಾನದ ಹುಂಡಿ ಎಣಿಕೆಗೆ ತಾಲೂಕು ಕಚೇರಿ ಸಿಬ್ಬಂದಿಗಳು ಹಾಗೂ ಬ್ಯಾಂಕ್ ಸಿಬ್ಬಂದಿಗಳು ತೆರಳುತ್ತಾರೆ. ಪ್ರತಿಯೊಂದು ಬಾರಿ ಐವತ್ತು ಲಕ್ಷಕ್ಕೂ ಅಧಿಕ ಹಣ ಹುಂಡಿಯಲ್ಲಿ ಸಂಗ್ರವಾಗುತ್ತದೆ. ಮಾಹಿತಿಯ ಪ್ರಕಾರ ಮೂರು ಅಥವಾ ನಾಲ್ಕು ತಿಂಗಳಿಗೊಮ್ಮೆ ಹಣವನ್ನು ಮುಜರಾಯಿ ಇಲಾಖೆಯ ಅಧಿಕಾರಿಗಳು ಎಣಿಕೆ ಮಾಡುತ್ತಾರೆ.
quarterly donation count