Suddilive || Sagara
ತಪ್ಪಿತಸ್ಥರ ಕ್ರಮಕ್ಕೆ ಶಾಸಕ ಬೇಳೂರು ಆಗ್ರಹ -MLA Beluru demands action against culprits
ಜನಿವಾರ ತೆಗೆಸಿದ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ತರು ಯಾರೇ ಆಗಿದ್ದರೂ ಅವರ ವಿರುದ್ದ ನಿರ್ಧಾಕ್ಷಿಣ್ಯಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾವುದೇ ಧರ್ಮದ ಧಾರ್ಮಿಕ ಭಾವನೆಗಳಿಗೆ ಘಾಸಿಯುಂಟು ಮಾಡುವ ಕೆಲಸ ಯಾರೂ ಮಾಡಬಾರದು. ಸಿಇಟಿ ಪರೀಕ್ಷೆ ತಪಾಸಣೆ ನೆಪದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಪ್ರಕರಣವನ್ನು ನಾನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದರು.
ತಪ್ಪಿತಸ್ತರ ವಿರುದ್ದ ಕ್ರಮ ಕೈಗೊಳ್ಳದೆ ಹೋದಲ್ಲಿ ನಾನು ಆಡಳಿತ ಪಕ್ಷದ ಸದಸ್ಯನಾದರೂ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡುವುದು ಅನಿವಾರ್ಯವಾಗುತ್ತದೆ. ಈಗಾಗಲೆ ಮುಖ್ಯಮಂತ್ರಿಗಳು ಘಟನೆಯನ್ನು ಖಂಡಿಸಿದ್ದಾರೆ. ಸರ್ಕಾರದಿಂದ ಜನಿವಾರ ತೆಗೆಸಿ ಪರೀಕ್ಷಾ ಕೊಠಡಿಗೆ ಕಳಿಸಿ ಎನ್ನುವ ಯಾವ ಸೂಚನೆಯೂ ಇರಲಿಲ್ಲ. ಆದರೂ ಕೆಲವು ಕಡೆ ಅಧಿಕಾರಿಗಳು ತಪ್ಪು ಮಾಡಿದ್ದಾರೆ. ಇಂತಹ ಅಧಿಕಾರಿಗಳನ್ನು ಕಡಿವಾಣ ಹಾಕದೆ ಹೋದಲ್ಲಿ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದರು.
MLA Beluru demands