Suddilive || Shivamogga
ಇಟ್ಟಿಗೆ ನಿರ್ಮಿಸುವ ಶೆಡ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ-Man commits suicide in brick-making shed
ತಾಲೂಕಿನ ತೋಟದಕೊಪ್ಪ ಗ್ರಾಮದ ಇಟ್ಟಿಗೆ ತಯಾರು ಮಾಡಲು ನಿರ್ಮಿಸಿದ್ದ ಶೆಡ್‌ನಲ್ಲಿಯೇ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಉಂಬಳೇಬೈಲು ಗ್ರಾಪಂ ವ್ಯಾಪ್ತಿಯ ಹುರಳಿಹಳ್ಳಿಯ ನಿವಾಸಿ ಜಾನಕಿರಾಮ್(34) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇಟ್ಟಿಗೆ ನಿರ್ಮಿಸುವ ಶೆಡ್‌ನಲ್ಲಿ ಸೀರೆ ಬಳಸಿ ಜಾನಕಿರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದು, ಹೆಚ್ಚು ಸಾಲ ಮಾಡಿಕೊಂಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ.
ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Man commits suicide