ಶಾಸಕ ಮತ್ತು ಸಚಿವರ ವಿರುದ್ಧ ಘೋಷಣೆ-ರೈತ ಮುಖಂಡರನ್ನ ವಶಕ್ಕೆ ಪಡೆದ ಪೊಲೀಸರು-Police arrest farmer leaders

Suddilive || Sagara

ಶಾಸಕ ಮತ್ತು ಸಚಿವರ ವಿರುದ್ಧ ಘೋಷಣೆ-ರೈತ ಮುಖಂಡರನ್ನ ವಶಕ್ಕೆ ಪಡೆದ ಪೊಲೀಸರು-Police arrest farmer leaders who raised slogans against MLAs and ministers

Farmer, arrest

ಪ್ರತಿಭಟನಾ ನಿರತ 50ಕ್ಕೂ ಹೆಚ್ಚು ರೈತರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ನಗರದಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ತಾಲೂಕು ಆಡಳಿತ ಕಛೇರಿಯ ಎದುರು ರೈತ ಸಂಘಕ್ಕೆ ಜನಸ್ಪಂದನಾ ಕಾರ್ಯಕ್ರಮ ಮಾಡಲು ಅವಕಾಶ ನೀಡದ ಆಡಳಿತದ ಕ್ರಮ ಹಾಗೂ ತಾಲೂಕು ಆಡಳಿತದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರೈತ ಸಂಘದ ಜಿಲ್ಲಾ ಅಧ್ಯಕ್ಷ ದಿನೇಶ್ ಶಿರವಾಳ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು. 

ಮಧ್ಯಾಹ್ನ ಸುಮಾರಿಗೆ ರೈತ ಸಂಘದ ಜಿಲ್ಲಾ ಅಧ್ಯಕ್ಷ ದಿನೇಶ್ ಶಿರವಾಳ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾ ನಿರತ ರೈತ ಮುಖಂಡರನ್ನು ಸಾಗರ ಪೇಟೆ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ರೈತ ಮುಖಂಡ ದಿನೇಶ್ ಶಿರವಾಳ, ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ,ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ತಾಲೂಕು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

Police arrest farmer leaders

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close