Suddilive || Shivamogga
ಎರಡು ಪ್ರತ್ಯೇಕ ಆತ್ಮಹತ್ಯೆ ಪ್ರಕರಣ-ಇಬ್ಬರು ಸಾವು-Two separate suicide cases-two deaths
ಎರಡು ಪ್ರತ್ಯೇಕ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಓರ್ವ 42 ವರ್ಷದ ವ್ಯಕ್ತಿ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, 61 ವರ್ಷದ ಮಾಜಿ ಇಂಜಿನಿಯರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಶಿವಮೊಗ್ಗದ ರವೀಂದ್ರ ನಗರ ಸಚಿನ್ ಎಂಬ 42 ವರ್ಷದ ಯುವ ಮನೆಯ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಹಿತಿ ಪ್ರಕಾರ ಸಚಿನ್ ಇತ್ತೀಚೆಗೆ ತಮ್ಮ ಸಂಬಂಧಿಕರ ಸಾವೊಂದು ನಡೆದಿದ್ದು ಈ ಸಾವಿನಬಗ್ಗೆ ಮನದಲ್ಲಿರಿಸಿಕೊಂಡಿದ್ದ ಕಾರಣ ಜೀವನ ಇಷ್ಟೆ ಎಂಬ ನಿರ್ಧಾರಕ್ಕೆ ಬಂದ ಸಚಿನ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಹೊರಬಿದ್ದಿದೆ.
ಸಚಿನ್ 42 ವರ್ಷವಾದರೂ ಮದುವೆಯಾಗಿರಲಿಲ್ಲ. ರಿಯಲ್ ಎಸ್ಟೇಟ್ ನಲ್ಲಿ ಗುರುತಿಸಿಕೊಂಡಿದ್ದ. ತಂದೆ ಜೊತೆಯಲ್ಲಿದ್ದ ಸಚಿನ್ ಇಂದು ಬೆಳಿಗ್ಗೆ ಟಾಯಿಲೆಟ್ ಗೆ ಹೋದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸದಾಶಿವಪ್ಪ ಆತ್ಮಹತ್ಯೆ
ಶರಾವತಿ ನಗರದ ನಿವಾಸಿ ಸದಾಶಿವ ಎಂಬ ಇಂಜಿನಿಯರ್ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಗೆ 61 ವರ್ಷ ವಯಸ್ಸಾಗಿತ್ತು. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
two deaths