ಸ್ನೇಹದ ನಡುವಿನ ಕಲಹ-ಕೊಲೆಯಲ್ಲಿ ಅಂತ್ಯ-ends in murder

Suddilive || Shivamogga

ಸ್ನೇಹದ ನಡುವಿನ ಕಲಹ-ಕೊಲೆಯಲ್ಲಿ ಅಂತ್ಯ--A quarrel between friends ends in murder

Ends, murdered


ನಗರದ ಹೊರವಲಯ ತ್ಯಾವರಕೊಪ್ಪದಲ್ಲಿ ಬುಧವಾರ ಮಧ್ಯಾಹ್ನ ಸ್ನೇಹಿತರ ನಡುವಿನ ಕಲಹ ವಿಕೋಪಕ್ಕೆ ತಿರುಗಿ ಗುದ್ದಲಿಯಿಂದ ತಲೆಗೆ ಹೊಡೆದು ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ.

ತ್ಯಾವರೆಕೊಪ್ಪದ ದೇವರಾಜ್ (31) ಕೊಲೆಗೀಡಾದ ವ್ಯಕ್ತಿ. ಅದೇ ಗ್ರಾಮದ ವೆಂಕಟೇಶ್ (36) ಕೊಲೆ ಮಾಡಿದ ಆರೋಪಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಬಾರ್‌ಬೆಂಡಿಂಗ್ ಕೆಲಸ ಮಾಡಿಕೊಂಡಿದ್ದ ವೆಂಕಟೇಶ್ ಮತ್ತು ದೇವರಾಜ್ ಇಬ್ಬರೂ ಸ್ನೇಹಿತರಾಗಿದ್ದು ಇಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಯಾಗಿದೆ. ಇದು ವಿಕೋಪಕ್ಕೆ ತಿರುಗಿ ಇಬ್ಬರ ನಡುವೆ ಕೈ ಕೈ ಮಿಲಾವಣೆಯಾಗಿದೆ. ಈ ವೇಳೆ ವೆಂಕಟೇಶ್ ಗುದ್ದಲಿಯಿಂದ ತಲೆಗೆ ಹಲ್ಲೆ ಮಾಡಿದ್ದು ಗಂಭೀರವಾಗಿ ಗಾಯಗೊಂಡ ದೇವರಾಜ್ ಸ್ಥಳದಲ್ಲೇ ಕುಸಿದು ಮೃತಪಟ್ಟಿದ್ದಾರೆ. ಘಟನೆ ನಡೆದ ಕೆಲ ಗಂಟೆಗಳಲ್ಲಿಯೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ends in murder

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close