ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿಗರಿಗೆ ಒತ್ತಡ, ಅನಗತ್ಯ ಕಿರುಕುಳ ಹೆಚ್ಚಾಗಿದೆ-ವಿಜೇಂದ್ರ-harassment on BJP members

Suddilive || Shikaripura

 ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿಗರಿಗೆ ಒತ್ತಡ, ಅನಗತ್ಯ ಕಿರುಕುಳ ಹೆಚ್ಚಾಗಿದೆ-ವಿಜೇಂದ್ರ-Pressure and unnecessary harassment on BJP members has increased since the Congress government came to power - Vijendra

Bjp, Harassment


ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ  ಘಟನೆಗೆ ರಾಜಕೀಯ ಒತ್ತಡವೇ ಕಾರಣವೆಂದು ತಿಳಿದು ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ಆರೋಪಿಸಿದರು. 

ಶಿಕಾರಿಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೂಲಂಕುಶವಾಗಿ ಪಾರದರ್ಶಕ ತನಿಖೆ ನಡೆದು ಸತ್ಯ ಹೊರಬರಬೇಕಿದೆ. ರಾಜಕೀಯ ಕಾರಣಗಳು ಹಾಗೂ ಒತ್ತಡಗಳ ಹಿನ್ನೆಲೆಯಲ್ಲಿ ಎಫ್ಐಆರ್  ಆತ್ಮಹತ್ಯೆ ನಡೆದಿದೆ ಎಂದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಅನಗತ್ಯ ಕಿರುಕುಳ, ಒತ್ತಡ, ದೌರ್ಜನ್ಯ ನಡೆಯುತ್ತಿದೆ. ಈ ನಿಟ್ಟಿನಲ್ಲಿ ವಿನಯ್ ಸೋಮಯ್ಯ  ಆತ್ಮಹತ್ಯೆ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಬೇಕು ಎಂದು ಆಗ್ರಹಿಸಿದರು. 

ಮಾನಸಿಕ ಒತ್ತಡ ಕ್ಕೆ  ಕಾರಣರಾದವರ ವಿರುದ್ಧ ರಾಜ್ಯ ಸರ್ಕಾರ ಈ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮೃತ ಕಾರ್ಯಕರ್ತ ವಿನಯ್ ಅವರ ನಿಧನದ ನೋವಿನಲ್ಲಿರುವ ಕುಟುಂಬ ವರ್ಗದವರಿಗೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. 

ವಿನಯ್ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲೆಂದು ವಿಜೇಂದ್ರ ಸಂತಾಪ ಸೂಚಿಸಿದರು. 

harassment on BJP members

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close