ಸಂಸಾರ ತ್ಯಜಿಸಿ ಓಡಿಹೋದ ಪತ್ನಿ; ಪುತ್ರಿ ಸೇರಿ ಮೂವರಿಗೆ ಗುಂಡಿಟ್ಟು ಕೊಂದು, ತಾನು ಸಾವಿಗೆ ಶರಣಾದ ಪತಿ-surrendered to death

 Suddilive || Balehonnuru

 ಸಂಸಾರ ತ್ಯಜಿಸಿ ಓಡಿಹೋದ ಪತ್ನಿ; ಪುತ್ರಿ ಸೇರಿ ಮೂವರಿಗೆ ಗುಂಡಿಟ್ಟು ಕೊಂದು, ತಾನು ಸಾವಿಗೆ ಶರಣಾದ ಪತಿ-Wife who abandoned family and ran away; husband who shot three people including daughter and then surrendered to death

Surrendred, death


ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ‌.

ಕಡಬಗೆರೆಯ ಶಾಲೆಯೊಂದರಲ್ಲಿ ವಾಹನ ಚಾಲಕನಾಗಿದ್ದ ರತ್ನಾಕರ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಅತ್ತೆ ಜ್ಯೋತಿ(50), ಮಗಳು ಮೌಲ್ಯ(6) ಮತ್ತೆ ನಾದಿನಿ ಸಿಂಧು(24) ಗುಂಡು ತಗುಲಿ ಮೃತಪಟ್ಟಿದ್ದಾರೆ. ನಾದಿನಿಯ ಗಂಡನ ಕಾಲಿಗೆ ಗುಂಡು ತಗಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರತ್ನಾಕರ ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಾಲೆಯಲ್ಲಿ ಮಗಳ ಸಹಪಾಠಿಗಳು ನಿಮ್ಮ ಅಮ್ಮ ಎಲ್ಲಿ ಎಂದು ಕೇಳುತ್ತಾರೆ ಎಂದು ಅಪ್ಪ ರತ್ನಾಕರ್ ಬಳಿ ಮೌಲ್ಯ ಅಳಲು ತೋಡಿಕೊಂಡಿದ್ದಳು. ಇದರಿಂದ ಮನನೊಂದಿದ್ದ ರತ್ನಾಕರ್ ಮಂಗಳವಾರ ರಾತ್ರಿ 10 ಗಂಟೆ ವೇಳೆಗೆ ಮನೆಗೆ ತೆರಳಿ, ಅತ್ತೆ, ನಾದಿನಿ ಹಾಗೂ ಮಗಳನ್ನು ನಾಡಬಂದೂಕಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಹತ್ಯೆಯ ಬಳಿಕ ರತ್ನಾಕರ್, ಸೆಲ್ಫಿ ವಿಡಿಯೋ ಮಾಡಿ ಸಂಸಾರದ ನೋವನ್ನು ತೋಡಿಕೊಂಡಿದ್ದಾನೆ. ನನ್ನ ಹೆಂಡತಿ ಮೋಸ ಮಾಡಿ ಹೋಗಿ 2 ವರ್ಷ ಆಯ್ತು. ಮಗಳನ್ನು ಬೇಡ ಅಂತ ಬಿಟ್ಟು ಹೋಗಿದ್ದಾಳೆ. ಈಗ ಶಾಲೆಯಲ್ಲಿ ನನ್ನ ಮಗಳಿಗೆ ಆಕೆಯ ಸ್ನೇಹಿತರು ನಿನ್ನ ಅಮ್ಮ ಎಲ್ಲಿ ಎಂದು ಕೇಳುತ್ತಾರೆ. ಮಗಳು ಆಲ್ಬಂನಿಂದ ಅಮ್ಮನ ಫೋಟೋ ತೆಗೆದುಕೊಂಡು ಹೋಗಿ ಈಕೆಯೇ ನನ್ನ ಅಮ್ಮ ಅಂತ ತೋರಿಸಿದ್ದಾಳೆ ಎಂದು ವಿಡಿಯೋದಲ್ಲಿ ರತ್ನಾಕರ್ ನೋವನ್ನು ವ್ಯಕ್ತಪಡಿಸಿದ್ದಾನೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ

surrendered to death

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close