ಸ್ಥಳೀಯ ಸುದ್ದಿಗಳು

ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ನಡೆಯುವ ಪರೀಕ್ಷೆಗೆ ವಸ್ತ್ರ ಸಂಹಿತೆ ಕಡ್ಡಾಯ

ಸುದ್ದಿಲೈವ್/ಶಿವಮೊಗ್ಗ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ / ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ: 28-01-2024 ರಂದು ಬೆಳಗ್ಗೆ 11:00 ಗಂಟೆಯಿಂದ 12:30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುತ್ತಿದ್ದು, ಸದರಿ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಈ ಕೆಳಕಂಡ ವಸ್ತ್ರ ಸಂಹಿತೆಯನ್ನು ಪಾಲಿಸತಕ್ಕದ್ದು.

ವಸ್ತ್ರ ಸಂಹಿತೆ

ಎ) ಪುರುಷ ಮತ್ತು ತೃತಿಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೊಳಿನ ಶರ್ಟ್ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ ಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್ ಗಳು, ದೊಡ್ಡ ಬಟನ್ ಗಳು ಇರುವ ಶರ್ಟ್ಗಳನ್ನು ಧರಿಸತಕ್ಕದ್ದಲ್ಲ.

ಬಿ) ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್ಗಳನ್ನು ಧರಿಸತಕ್ಕದ್ದಲ್ಲ.

ಸಿ) ಪರೀಕ್ಷಾ ಕೇಂದ್ರದೊಳಗೆ ಶೂಗಳನ್ನು ನಿಷೇದಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಬಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು.

ಡಿ) ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇದಿಸಲಾಗಿದೆ.

ಇದನ್ನೂ ಓದಿ-https://suddilive.in/archives/7834

Related Articles

Leave a Reply

Your email address will not be published. Required fields are marked *

Back to top button