ಸ್ಥಳೀಯ ಸುದ್ದಿಗಳು

ಎರಡನೇ ಪಟ್ಟಿಯಲ್ಲಿ ಕರ್ನಾಟಕ ಲೋಕಸಭೆ ಸೀಟು ಅಂತಿಮವಾಗಲಿದೆ-ಬಿಎಸ್ ವೈ

ಸುದ್ದಿಲೈವ್/ಶಿವಮೊಗ್ಗ

ಲೋಕಸಭಾ ಟಿಕೇಟ್ ಹಂಚಿಕೆ ವಿಚಾರದ ಕುರಿತು ದೆಹಲಿಯಲ್ಲಿ ನಾಡಿದ್ದು ಸಭೆ ಇದೆ. ಸಭೆಯಲ್ಲಿ ಭಾಗವಹಿಸಲು ಹೋಗ್ತಿದ್ದೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಮಾಧ್ಯಮಗಳಿಗೆ ಮಾತನಾಡಿದ ಅವರು ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಪಟ್ಟಿ ಅಂತಿಮವಾಗಲಿದೆ. 28 ಕ್ಷೇತ್ರಗಳ ಪಟ್ಟಿ ಬಹುತೇಕ ಫೈನಲ್ ಆಗಬಹುದು. ಎಲ್ಲಾ ಕ್ಷೇತ್ರದ ಪಟ್ಟಿ ಫೈನಲ್ ಆಗ್ತದೆ ಎಂದರು.

ಹೊಸಬರಿಗೆ ಆದ್ಯತೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್ ವೈ ದೆಹಲಿ ನಾಯಕರ ‌ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ ಅವರ ತೀರ್ಮಾನವೇ ಅಂತಿಮವಾಗಲಿದೆ. ಬಿಜೆಪಿ ಜೆಡಿಎಸ್ ಹೊಂದಾಣಿಕೆ ನಿಶ್ಚಿತ ಆದರೆ ಸ್ಥಾನ ಹೊಂದಾಣಿಕೆ ಬಗ್ಗೆ ಅಂತಿಮವಾಗಿಲ್ಲ ಎಂದರು.

ಮಂಡ್ಯದಿಂದ ಸುಮಲತಾ ಸ್ಪರ್ಧೆ ಬಗ್ಗೆ ಯಾವುದೇ ಸ್ಪಷ್ಟವಾದ ಮಾಹಿತಿ ಇಲ್ಲ. ಗೋ ಬ್ಯಾಕ್ ಶೋಭ ಕರಂದ್ಲಾಜೆ ಎಂಬ ಅಭಿಯಾನಕ್ಕೆ ಯಾವುದೇ ಅರ್ಥವಿಲ್ಲ.‌ಅವರ ಒಳ್ಳೆಯ ಕೆಲಸ ಮಾಡುವುದನ್ನು ಸಹಿಸದೇ ಕೆಲವರು ಈ ರೀತಿ ಮಾಡಿದ್ದಾರೆ. ಇದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದರು.

ವಿಧಾನ ಸೌಧದಲ್ಲಿ ಘೋಷಣೆ ಕೂಗಿದ ಬಗ್ಗೆ ಎಫ್ ಎಸ್ ಎಲ್ ವರದಿಯನ್ನ ಖಾಸಗಿ ಸಂಸ್ಥೆಯೊಂದು ನೀಡಿದೆ. ಘೋಷಣೆ ಕೂಗಿರುವುದು ಸತ್ಯ ಎಂದಿದೆ. ಸರ್ಕಾರದ ವರದಿ ಬಂದು ಮೂರು ನಾಲ್ಕು ದಿನಗಳು ಕಳೆದರೂ ವರದಿ ಬಿಡುಗಡೆಯಾಗಿಲ್ಲ. ಎಫ್ ಎಸ್ ಎಲ್ ವರದಿ ತಕ್ಷಣ ಬಿಡುಗಡೆಗೊಳಿಸಬೇಕು. ವರದಿಯನ್ನು ಏಕೆ ಬಚ್ಚಿಟ್ಟುಕೊಂಡಿದ್ದಾರೋ ಗೊತ್ತಿಲ್ಲ. ಆದರೆ ಎಫ್ ಎಸ್ ಎಲ್ ವರದಿಯನ್ನ ಬಹಿರಂಗಗೊಳಿಸಬೇಕು ಎಂದು ಒತ್ತಾಯಿಸಿದರು.

ವಾಸ್ತವಿಕ ಸಂಗತಿ ದೇಶ ಹಾಗು ರಾಜ್ಯದ ಜನರಿಗೆ ಗೊತ್ತಾಗಬೇಕು. ವಿಳಂಬವಾದರೆ ಕ್ರಮ ಕೈಗೊಳ್ಳಲು ವಿಳಂಬವಾಗ್ತದೆ. ರಾಜ್ಯದಲ್ಲಿ ಬರದ ಹಿನ್ನಲೆಯಲ್ಲಿ  ನೀರಿಗೆ ಹಾಹಾಕಾರ ಆರಂಭವಾಗಿದೆ. ರಾಜ್ಯಾದ್ಯಂತ ಬರ ಹಾಗು ಕುಡಿಯುವ ನೀರಿನ ಆಹಾಕಾರ ಎದುರಾಗಿದೆ. 1 ಲೀ ನೀರು ದುಡ್ಡು ಕೊಟ್ಟು ಕುಡಿಯುವ ಪರಿಸ್ಥಿತಿ ಉಂಟಾಗಿದೆಆದಷ್ಟು ಬೇಗ ಮಳೆ ಬಂದು ಕೆರೆಕಟ್ಟೆ ತುಂಬಿ ಪರಿಸ್ಥಿತಿ ದೂರಾಗಲಿ ಅಂತಾ ದೇವರಲ್ಲಿ ಪ್ರಾರ್ಥಿಸುತ್ತೇನೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ರಾಜ್ಯ ಸರಕಾರ ಕ್ರಮ ವಹಿಸಬೇಕು ಎಂದರು.

ಬಾಂಬ್ ಸ್ಪೋಟದ ಪ್ರಕರಣವನ್ನ ಸಚಿವ ಶರಣಪ್ರಕಾಶ್ ಪಾಟೀಲ್ ಸಿಲ್ಲಿ ಮ್ಯಾಟರ್ ಎಂದು ವ್ಯಾಖ್ಯಾನಿಸಿದ್ದಾರೆ ಈ ಬಗ್ಗೆ ನಾನು ಪ್ರತಿಕ್ರಿಯೆ ‌ನೀಡಲ್ಲ. ರಾಜ್ಯ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಅಂತಾ ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಸರಕಾರ ಕ್ರಮ ಕೈಗೊಳ್ಳಬೇಕು ಎಂದರು.

ಇದನ್ನೂ ಓದಿ-https://suddilive.in/archives/9997

Related Articles

Leave a Reply

Your email address will not be published. Required fields are marked *

Back to top button