ರಾಜಕೀಯ ಸುದ್ದಿಗಳು

ನಾಳೆ 28 ಕ್ಷೇತ್ರಗಳ ಅಭ್ಯರ್ಥಿಗಳು ಫೈನಲ್-ಬಿಎಸ್ ವೈ

ಸುದ್ದಿಲೈವ್/ಸಾಗರ

ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಕರ್ನಾಟಕದ ಹೆಸರು ಇಲ್ಲವಾಗಿದೆ.‌ ಮಾಜಿ‌ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಹೆಸರು ಇರಲಿದೆ ಎನ್ನುವ ಮೂಲಕ ಕುತೂಹಲ‌ ಮೂಡಿಸಿದ್ದಾರೆ.

ಸಾಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ,  ದೆಹಲಿಯಲ್ಲಿ ನಾಳೆ ಚುನಾವಣಾ ಸಮಿತಿ ಮೀಟಿಂಗ್ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳ ಫೈನಲ್ ಮಾಡುವ ಮೀಟಿಂಗ್ ನಡೆಯಲಿದೆ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ತೀರ್ಮಾನ ಆಗಲಿದೆ ಎಂದು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.‌

ಪಟ್ಟಿ ಬಿಡುಗಡೆಯ ಬಗ್ಗೆ  ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ  ತೀರ್ಮಾನ ಕೈಗೊಳ್ಳಲಿದ್ದಾರೆ ಎಂದ ಅವರು ವಿಧಾನ ಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದವರ ಬಗ್ಗೆ ಎಫ್ಎಸ್ಎಲ್ ವರದಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ ಆರೋಪಿಗಳ ವಿರುದ್ಧ ಯಾರು ಕ್ರಮ ಕೈಗೊಳ್ಳುತ್ತಿಲ್ಲ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ ಎಂದರು.

ಪರಿಷತ್ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆ

ಪರಿಷತ್ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಮಾಧ್ಯಮಗಳೊಂದಿಗೆ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ರಾಷ್ಟ್ರ ವಿರೋಧಿ ಶಕ್ತಿಗಳಿಗೆ ಶಕ್ತಿ ಬಂದಿದೆ. ಎಫ್ ಎಸ್ ಎಲ್ ವರದಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಸ್ಪಷ್ಟವಾಗಿದ್ದರು ಸರ್ಕಾರ ಅವರನ್ನು ರಕ್ಷಿಸುವ ಕೆಲಸ ಮಾಡಿದೆ ಎಂದು ಆರೋಪಿಸಿದರು.

ಸಿಎಂ ಸಿದ್ದರಾಮಯ್ಯ ರಾಷ್ಟ್ರದ ವಿಷಯದಲ್ಲಿ ಮೀನಾಮೇಷ ಎಣಿಸಿದರೆ ರಾಷ್ಟ್ರ ವಿರೋಧಿ ಶಕ್ತಿಗಳಿಗೆ ಭಯೋತ್ಪಾದಕರಿಗೆ ನೈತಿಕ ಸ್ಥೈರ್ಯ ಬರಲಿದೆ. ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಉಳಿದ ಮಂತ್ರಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಆಗಿಲ್ಲ ಎಂದಿದ್ದರು. ಈಗೇನು ಹೇಳುತ್ತಾರೆ? ಎಫ್ಎಸ್ಎಲ್ ವರದಿಯನ್ನು ಸರ್ಕಾರ ಬಹಿರಂಗಪಡಿಸಬೇಕು. ಸರ್ಕಾರ ಆರೋಪಿಗಳನ್ನು ರಕ್ಷಣೆ ಮಾಡುವ ಹಂತದಲ್ಲಿದೆ ಎಂದರು.

ಬಾಂಬ್ ಸ್ಫೋಟ ಮಾಡಿದ ಆರೋಪಿಗಳನ್ನು ಕೂಡ ಹುಡುಕಿ ಬಂದಿಸಬೇಕು. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರ ಬಂಧನವಾಗಿದೆ ಈ ಬಗ್ಗೆ ಪ್ರಿಯಾಂಕ್ ಖರ್ಗೆ ತಮ್ಮ ನಿಲುವು ಸ್ಪಷ್ಟ ಪಡಿಸಬೇಕು.‌ ಮಂಡ್ಯ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ ವಿಚಾರದ ಬಗ್ಗೆ ಮಾತನಾಡಿದ ಪೂಜಾರಿ ಅವರು, ಪ್ರತೀಕಾರದ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ಬಂಧಿಸುವ ಕೆಲಸ ಆಗಿದೆ ಎಂದರು.

ಇದನ್ನೂ ಓದಿ-https://suddilive.in/archives/10104

Related Articles

Leave a Reply

Your email address will not be published. Required fields are marked *

Back to top button