ಸ್ಥಳೀಯ ಸುದ್ದಿಗಳು

ನಾಲ್ಕು ತರಗತಿಗಳ ಬೋರ್ಡ್ ಎಕ್ಸಾಮ್ ರದ್ದು

ಸುದ್ದಿಲೈವ್/ಬೆಂಗಳೂರು

5, 8, 9 ಮತ್ತು 11ನೇ ತರಗತಿಗಳ ಬೋರ್ಡ್‌ ಎಕ್ಸಾಂ ಜಾರಗೊಳಿಸಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ರದ್ದುಗೊಳಿಸಿದೆ. ಇದರಿಂದ ರುಪ್ಸಾಗೆ ಜಯ ದೊರೆತಿದೆ.

2023 ಡಿಸೆಂಬರ್‌ನಲ್ಲಿ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದರೆ ಹೈ ಕೋರ್ಟ್‌ ಆ ಸುತ್ತೋಲೆಯನ್ನು ರದ್ದುಗೊಳಿಸಿ ಆದೇಶ ನೀಡಿದೆ. ಹೈಕೋರ್ಟ್ ಮೊರೆ ಹೋಗಿದ್ದ ರುಪ್ಸಾಗೆ ಜಯ ಸಿಕ್ಕಿದೆ.

ಸರ್ಕಾರ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ನ್ಯಾ.ರವಿ ಹೊಸಮನಜ ಅವರಿಂದ ಆದೇಶ ಹೊರಬಿದ್ದಿದೆ.

ಬಿಜೆಪಿ ಸರ್ಕಾರವಿದ್ದಾಗ ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ 5 ನೇ ತರಗತಿ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಮಾದರಿಯ ಪರೀಕ್ಷೆ ಜಾರಿಗೆ ತಂದಿದ್ದರು. ಸಿದ್ದರಾಮಯ್ಯ ಸರ್ಕಾರ ಕೂಡ 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್‌ ಎಕ್ಸಾಂ ನಡೆಸುವ ಚಿಂತನೆ ಮಾಡಿತ್ತು. ಆದರೆ ಇದಕ್ಕೆ ಹೈಕೋರ್ಟ್ ತಡೆ ನೀಡಿದೆ.

ಸದ್ಯಕ್ಕೆ ರಾಜ್ಯದಲ್ಲಿ 10ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಎಕ್ಸಾಮ್‌ ನಡೆಸಲಾಗುತ್ತಿದೆ. ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು.

ಇದನ್ಬೂ ಓದಿ-https://suddilive.in/archives/10161

Related Articles

Leave a Reply

Your email address will not be published. Required fields are marked *

Back to top button