ಸ್ಥಳೀಯ ಸುದ್ದಿಗಳು

ಸಮೀಕ್ಷೆಯಲ್ಲಿ ಬಿಜೆಪಿಗೆ ಮುನ್ನಡೆ

ಸುದ್ದಿಲೈವ್/ಶಿವಮೊಗ್ಗ

ಚುನಾವಣೆ ಹತ್ತಿರವಿರುವ ವೇಳೆ ಸಮೀಕ್ಷೆಗಳು ಹರಿದು ಬರುತ್ತವೆ. ಚುನಾವಣೆಗೆ ಘೋಷಣೆ ಮಾತ್ರ ಬಾಕಿ ಉಳಿದಿದೆ. ಆದರೆ ಚುನಾವಣೆಯ ಸಮೀಕ್ಷೆ ಕುತೂಹಲ ಮೂಡಿಸಿದ್ದರಿಂದ ಸಮೀಕ್ಷೆ ಪ್ರಕಟ ಅನಿವಾರ್ಯವಾಗಿದೆ.  ಕೆಲವೊಂದು ವೇಳೆ ಸಮೀಕ್ಷೆ ಸರಿಯಾಗುತ್ತವೆ. ಕೆಲವೊಂದು ವೇಳೆ ಸಮೀಕ್ಷೆಗಳು ಪಲ್ಟಿ ಹೊಡೆದಿದ್ದು ಇವೆ.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ‌ ಪಟ್ಟಿ ಇಂದು ರಾತ್ರಿ ಕೇಂದ್ರ ಬಿಜೆಪಿ ಚುನಾವಣ ಸಮಿತಿ ಸಭೆ ನಡೆಸಿ ನಾಳೆ ನಾಡಿದ್ದಂಗೆ ಎರಡನೇ ಪಟ್ಟಿ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಶಿವಮೊಗ್ಗದಿಂದ‌ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಪುತ್ರ ಬಿ.ವೈ ರಾಘವೇಂದ್ರ ಅವರ ಹೆಸರು ಫೈನಲ್ ಆಗಲಿದೆ.‌ ಅಷ್ಟಕ್ಕೂ ಶಿವಮೊಗ್ಗದಲ್ಲಿ ರಾಘವೇಂದ್ರರ ಹೆಸರು ಬಿಟ್ಟು ಬೇರೆಯಾವ‌ ಆಕಾಂಕ್ಷಿಯ ಹೆಸರು ಹೈಕಮಾಂಡ್ ಕೈಗೆ ತಲುಪದ ಕಾರಣ ಬಿವೈ ಆರ್ ಹೆಸರು ಫೈನಲ್ ಆಗಲಿದೆ.

ಈ ಬಾರಿಯ ಲೋಕಸಭೆ ಚುನಾವಣೆ ಕುರಿತು India TV-CNX ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದೆ. ಕರ್ನಾಟಕದಲ್ಲಿ ಬಿಜೆಪಿ 22, ಜೆಡಿಎಸ್ 2 ಮತ್ತು ಕಾಂಗ್ರೆಸ್ 4 ಸ್ಥಾನಗಳಿಸಲಿದೆ ಎಂದು ಸಮೀಕ್ಷೆ ಅಂದಾಜಿಸಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಶಿವಮೊಗ್ಗ ಸಹ ಕುತೂಹಲ ಕೆರಳಿಸಿರುವ ಕ್ಷೇತ್ರವಾಗಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕುರಿತು ಸಹ ಸಮೀಕ್ಷೆ ನಡೆಸಲಾಗಿದೆ. ಶಿವಮೊಗ್ಗ ಬಿಜೆಪಿಯ ಭದ್ರಕೋಟೆ ಎಂಬುದು ಹಿಂದಿನ ಚುನಾವಣೆಗಳಿಂದ ಸಾಬೀತಾಗಿದೆ. ಕಾಂಗ್ರೆಸ್ ಪ್ರತಿ ಬಾರಿ ಅಭ್ಯರ್ಥಿ ಬದಲಾವಣೆ ಮಾಡಿದರೂ ತಂತ್ರಗಾರಿಕೆಯಲ್ಲಿ ಫಲ ಕೊಡುತ್ತಿಲ್ಲ. ಹೀಗಾಗಿ ಬಿಜೆಪಿ ಗೆಲವು ಪಕ್ಕವಾದರೂ ಕಾಂಗ್ರೆಸ್ ನ ಅಭ್ಯರ್ಥಿಯ ಮೇಲೆ ಅಖಾಡ ನಿರ್ಧಾರವಾಗಲಿದೆ.

ಬಿಜೆಪಿಗೆ ಮುನ್ನಡೆ: India TV-CNX ಸಮೀಕ್ಷೆಯ ಪ್ರಕಾರ ಶಿವಮೊಗ್ಗದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಲಿದೆ. ದೇಶದಲ್ಲಿ ಎನ್ ಡಿಎ 378 ಸ್ಥಾನ ಪಡೆದರೆ, ಇಂಡಿಯಾ ಕೂಟ 98 ಸ್ಥಾನ ಪಡೆಯಲಿದೆ ಇತರರು 67 ಸ್ಥಾನ ಪಡೆಯಲಿದೆ. ಕಾಂಗ್ರೆಸ್ ಕೇವಲ 37 ಸ್ಥಾನ ಪಡೆಯಲಿದೆ. ಬಿಜೆಪಿ ಒಂದೇ 335 ಸ್ಥಾನ ಪಡೆಯಲಿದೆಎಂದು ಸಮೀಕ್ಷೆ ಹೇಳುತ್ತಿದೆ.

ಶಿವಮೊಗ್ಗ ಕ್ಷೇತ್ರದ ಹಾಲಿ ಸಂಸದರು ಬಿಜೆಪಿಯ ಬಿ. ವೈ. ರಾಘವೇಂದ್ರ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಿವಮೊಗ್ಗ ನಗರ (ಬಿಜೆಪಿ), ಶಿವಮೊಗ್ಗ ಗ್ರಾಮಾಂತರ (ಜೆಡಿಎಸ್), ಭದ್ರಾವತಿ (ಕಾಂಗ್ರೆಸ್), ಸೊರಬ (ಕಾಂಗ್ರೆಸ್), ಸಾಗರ (ಕಾಂಗ್ರೆಸ್), ತೀರ್ಥಹಳ್ಳಿ (ಬಿಜೆಪಿ), ಶಿಕಾರಿಪುರ (ಬಿಜೆಪಿ), ಉಡುಪಿ ಜಿಲ್ಲೆಯ ಬೈಂದೂರು (ಬಿಜೆಪಿ) ವಿಧಾನಸಭಾ ಕ್ಷೇತ್ರಗಳಿವೆ.

2009ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಬಿ. ವೈ. ರಾಘವೇಂದ್ರ 482,783 ಮತಗಳನ್ನು ಪಡೆದು ಕಾಂಗ್ರೆಸ್‌ನ ಎಸ್. ಬಂಗಾರಪ್ಪ (429,890 ಮತ) ಸೋಲಿಸಿದರು. ಈ ಚುನಾವಣೆ ರಾಜ್ಯದ ಗಮನಸೆಳೆದಿತ್ತು. 2014ರ ಚುನಾವಣೆಯಲ್ಲಿಯೂ ಶಿವಮೊಗ್ಗ ಚುನಾವಣೆ ರಾಜ್ಯದ ಗಮನ ಸೆಳೆದಿತ್ತು. ಗೀತಾ ಶಿವರಾಜ್ ಕುಮಾರ್ ಜೆಡಿಎಸ್‌ ಅಭ್ಯರ್ಥಿಯಾಗಿದ್ದರು. ಎದುರಾಳಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 606,216 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್‌ನ ಮಂಜುನಾಥ ಭಂಡಾರಿ (242,911 ಮತ) ಪಡೆದು 2ನೇ ಸ್ಥಾನ, ಗೀತಾ ಶಿವರಾಜ್ ಕುಮಾರ್ (240,636 ಮತ) ಪಡೆದು 3ನೇ ಸ್ಥಾನ ಪಡೆದಿದ್ದರು.

2019ರ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿದರು. ಬಿಜೆಪಿಯ ಬಿ. ವೈ. ರಾಘವೇಂದ್ರ 729,872 ಮತಗಳನ್ನು ಪಡೆದು ಜಯಗಳಿಸಿದರು. ಮಧು ಬಂಗಾರಪ್ಪ 506,512 ಮತ ಪಡೆದು ಸೋಲು ಕಂಡರು.

ಮೂರು ಚುನಾವಣೆಯಲ್ಲಿಯೂ ಕಾಂಗ್ರೆಸ್ ಶಿವಮೊಗ್ಗದಲ್ಲಿ ಅಭ್ಯರ್ಥಿ ಬದಲಾವಣೆ ಮಾಡುವ ದಾಳ ಉರುಳಿಸಿದೆ. ಆದರೆ ಶಿವಮೊಗ್ಗದಲ್ಲಿ ಪಕ್ಷದ ಬಾವುಟ ಹಾರಿಸಲು ಸಾಧ್ಯವಾಗಿಲ್ಲ. ಈ ಬಾರಿ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು. ಆರ್. ಎಂ. ಮಂಜುನಾಥ ಗೌಡ, ಆಯನೂರು ಮಂಜುನಾಥ, ಕಿಮ್ಮನೆ ರತ್ನಾಕರ್, ಎಂ. ಶ್ರೀಕಾಂತ್ ಹೀಗೆ ಕಾಂಗ್ರೆಸ್‌ನ ಸಾಲು ಸಾಲು ಕಾಂಗ್ರೆಸ್‌ನ ನಾಯಕರಿದ್ದಾರೆ. ಆದರೆ ಗೀತಾ ಶಿವರಾಜ್ ಕುಮಾರ್ ಅವರ ಹೆಸರನ್ನ ಪ್ರಕಟಿಸುವ ಸಾಧ್ಯತೆ ಇದೆ.‌

ಇದನ್ನೂ ಓದಿ-https://suddilive.in/archives/10197

Related Articles

Leave a Reply

Your email address will not be published. Required fields are marked *

Back to top button